ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ ಪ್ರತಿಷ್ಠಿತ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ವೀರಶೈವ ಧರ್ಮ ಸಂಸ್ಥಾಪಕರು ಜಗದ್ಗುರು ಶ್ರೀ ರೇಣುಕಾಚಾರ್ಯರ ಜಯಂತೋತ್ಸವವನ್ನು ಬುಧವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಸಿದ್ದನಗೌಡ ಮಂಗಳೂರ ಅವರು ಮಾತನಾಡಿ ಜಗದ್ಗುರು ರೇಣುಕಾಚಾರ್ಯ ಅವರು ಸಿದ್ಧಾಂತ ಶಿಖಾಮಣಿಯಂತಹ ಮಹಾನ್ ಗ್ರಂಥವನ್ನು ಕೊಡುಗೆಯಾಗಿ ನೀಡಿದ್ದಾರೆ. ಸಾಮರಸ್ಯ, ಸಹಬಾಳ್ವೆ, ಸೌಹಾರ್ದತೆ ಬದುಕನ್ನು ಅವರು ಬೋಧಿಸಿದ್ದಾರೆ ಅವರ ಬದುಕಿನ ಸಿದ್ಧಾಂತವನ್ನು ಪಾಲಿಸಲು ನಾವೆಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕಾಗಿದೆ ಎಂದರು. ಮುಖ್ಯಗುರುಗಳಾದ ಸಂತೋಷ ಪವಾರ, ಶಿಕ್ಷಕರಾದ ರಾಜು ಜವಳಗೇರಿ, ದೈಹಿಕ ಶಿಕ್ಷಕರಾದ ಬಸವರಾಜ ಚಳ್ಳಗಿ, ಶಾಂತಗೌಡ ಬಿರಾದಾರ, ಭೀಮನಗೌಡ ಸಾಸನೂರ, ರಸೂಲಸಾ ತುರ್ಕನಗೇರಿ, ರವಿಕುಮಾರ ಮಲ್ಲಾಬಾದಿ, ಬಸವರಾಜ ಸವದತ್ತಿ , ಮೌಲಾಲಿ ವಾಲಿಕಾರ, ಸಿದ್ದನಗೌಡ ಮೂದನೂರು, ಶರಣಗೌಡ ಕಾಚಾಪುರ, ರೂಪಾ ಪಾಟೀಲ, ಶಿವಲೀಲಾ ಚುಂಚನೂರ, ದೇವಿಂದ್ರ ಗುಳೆದ, ಅನಿತಾ ಚೌದ್ರಿ, ಅಂಬುಜಾ ಹಜೇರಿ, ಶಿವಕುಮಾರ ಕುಂಬಾರ, ರಾಜಬಿ ಬಿದರಿ, ಕಲ್ಪನಾ ಹಜೇರಿ, ನಾಗರತ್ನ ಮೈಲೇಶ್ವರ, ಹೇಮಾ ಕೊಡೆಕಲ್, ನಾಗಶ್ರೀ ನಾಯಕ, ಮೇಘಾ ಪಾಟೀಲ, ಮುಬಿನ ಮುರಾಳ, ತನುಶ್ರೀ ಮಹೇಂದ್ರಕರ, ಶಂಕ್ರಮ್ಮ, ಮುಬಾರಕ ಬನಹಟ್ಟಿ ಹಾಗೂ ಸರ್ವ ಗುರು ಬಳಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿಗಾರರು : ನಜೀರ್ ಅಹ್ಮದ ಚೋರಗಸ್ತಿ