
ಬೀದರ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಸುಕ್ಷೇತ್ರ ಹಾರಕೂಡ ಶ್ರೀ ಗುರುಲಿಂಗ ಶಿವಾಚಾರ್ಯ ಉಚಿತ ವಸತಿ ಶಾಲೆಯ ವಾರ್ಷಿಕೋತ್ಸವ ಹಾಗೂ 10ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವು ಸಂಸ್ಥೆಯ ಅಧ್ಯಕ್ಷರಾದ ಪೂಜ್ಯ ಶ್ರೀ ಡಾ. ಚನ್ನವೀರ ಶಿವಾಚಾರ್ಯರ ಪಾವನ ಸಾನಿಧ್ಯದಲ್ಲಿ ಅದ್ದೂರಿಯಾಗಿ ಜರುಗಿತು.
ಇದೇ ಸಂದರ್ಭದಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳು ಹಾರಕೂಡದ ಪೂಜ್ಯ ಶ್ರೀ ಡಾ. ಚನ್ನವೀರ ಶಿವಾಚಾರ್ಯರಿಗೆ 784ನೇ ತುಲಾಭಾರ ಮಾಡಿ 21 ತೊಲೆ ಬೆಳ್ಳಿ ಪ್ರಸಾದ ತಟ್ಟೆ ನೀಡಿ ಆಶೀರ್ವಾದ ಪಡೆದರು.
ವರದಿ : ಶ್ರೀನಿವಾಸ ಬಿರಾದಾರ