ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಹತ್ತನೇ ತರಗತಿ ಮಕ್ಕಳ ಬೀಳ್ಕೊಡುಗೆ ಸಮಾರಂಭ

ಬಳ್ಳಾರಿ/ ಕಂಪ್ಲಿ : ಕಂಪ್ಲಿಯ ನಿವೇದಿತ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2024-25ನೇ ಸಾಲಿನ ಹತ್ತನೇ ತರಗತಿ ಮಕ್ಕಳ ಬಿಳ್ಕೊಡುಗೆ ಸಮಾರಂಭ ಹಾಗೂ ಸರಸ್ವತಿ ಪೂಜಾ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಎಂ. ಪುಪ್ಪಾ ಮಾತನಾಡಿ, ಹತ್ತನೇ ತರಗತಿಯ ಮಕ್ಕಳಿಗೆ ಸುಲಭವಾಗಿ ಪರೀಕ್ಷೆಯನ್ನು ಎದುರಿಸುವ ಬಗ್ಗೆ ಕೆಲವು ಸಲಹೆ ಸೂಚನೆಗಳನ್ನು ನೀಡುವುದರ ಮೂಲಕ ಆತ್ಮಸ್ಥೈರ್ಯವನ್ನು ತುಂಬಿದರು.

ನಂತರ ಮಾತನಾಡಿದ ಮುಖ್ಯ ಗುರುಗಳಾದ ಹೆಚ್.ಮರಿಯಪ್ಪ ನಮ್ಮ ಶಾಲೆಯು ಸತತವಾಗಿ ಏಳು ವರ್ಷಗಳ ಕಾಲ ನೂರಕ್ಕೆ ನೂರು ಫಲಿತಾಂಶ ಪಡೆದಿದ್ದೇವೆ. ಅದೇ ರೀತಿಯಾಗಿ ಈ ವರ್ಷವೂ ಸಹ ಅದೇ ರೀತಿಯ ಫಲಿತಾಂಶವನ್ನು ಪಡೆಯುವ ವಿಶ್ವಾಸವಿದೆ. ಮಕ್ಕಳಿಗೆ ಮೌಲ್ಯಾಧಾರಿತ ವಿದ್ಯಾಭ್ಯಾಸಕ್ಕೆ ತಂದೆ-ತಾಯಿಯ ಹಾಗೂ ಎಲ್ಲಾ ಶಿಕ್ಷಕರ ಪರಿಶ್ರಮ ಮುಖ್ಯವಾಗಿರುತ್ತದೆ ಎಂದು ತಿಳಿಸಿದರು.

ಈ ಸಮಯದಲ್ಲಿ 2023-24ನೇ ಸಾಲಿನ ಅತಿ ಹೆಚ್ಚು ಅಂಕ ಪಡೆದು ಶಾಲೆಗೆ ಕೀರ್ತಿತಂದ ವಿದ್ಯಾರ್ಥಿನಿ ಜೆ.ಜನನಿ 580/625 ಶೇಕಡಾ 92.80% ಅಂಕವನ್ನು ಪಡೆದ ವಿದ್ಯಾರ್ಥಿನಿಗೆ ಸನ್ಮಾನಿಸಿ ಶಾಲಾ ವತಿಯಿಂದ ಕಿರು ಕಾಣಿಕೆ ನೀಡಲಾಯಿತು.

ಈ ಸಮಯದಲ್ಲಿ ಕುಮಾರಿ ಜೆ. ಜನನಿ ಮಾತನಾಡಿ ನಮ್ಮ ನಿವೇದಿತ ಶಾಲೆಯು ನಮಗೆ ಮೌಲ್ಯಾಧಾರಿತ ಶಿಕ್ಷಣವನ್ನು ನೀಡಿದೆ. ಈ ಶಾಲೆಯ ಎಲ್ಲಾ ಶಿಕ್ಷಕ/ಶಿಕ್ಷಕಿಯರು ಮತ್ತು ಆಡಳಿತ ಮಂಡಳಿಯವರು ಸೇರಿ ಒಂದು ಕುಟುಂಬದಂತೆ ನಮ್ಮನ್ನು ನೋಡಿಕೊಂಡು ಒಳ್ಳೆಯ ವಿದ್ಯಾಭ್ಯಾಸವನ್ನು ಕೊಟ್ಟಿದ್ದಾರೆ. ಆದ್ದರಿಂದ ನನಗೆ ಈ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗಿದೆ. ನಾನು ನಿವೇದಿತ ಆಂಗ್ಲ ಮಾಧ್ಯಮ ಶಾಲೆಗೆ ಸದಾಕಾಲ ಚಿರಋಣಿಯಾಗಿರುತ್ತೇನೆ ಎಂದು ಪ್ರಶಂಸೆ ವ್ಯಕ್ತಪಡಿಸಿದಳು.
ಈ ಸಂದರ್ಭದಲ್ಲಿ ಶ್ರೀ ಮಾತಾ ಮೊಂಟಸರಿ ವಿದ್ಯಾ ಸಂಸ್ಥೆ (ರಿ.) ನಿವೇದಿತಾ ಆಂಗ್ಲ ಮಾಧ್ಯಮ ಶಾಲೆ ಕಂಪ್ಲಿಯ ಅಧ್ಯಕ್ಷರಾದ ಹೆಚ್. ಮರಿಯಪ್ಪ, ಕಾರ್ಯದರ್ಶಿಗಳಾದ ಕೆ.ರಾಮು, ಮುಖ್ಯ ಶಿಕ್ಷಕಿಯಾದ ಎಂ. ಪುಷ್ಪ ಮತ್ತು ಶಿಕ್ಷಕ / ಶಿಕ್ಷಕಿಯರು ಹಾಗೂ ಸಿಬ್ಬಂದಿ ವರ್ಗದವರು ಭಾಗಿಯಾಗಿದ್ದರು.

ವರದಿ : ಜಿಲಾನ್ ಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ