ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಆಗ್ರಹ

ಕಲಬುರಗಿ/ ಚಿತ್ತಾಪುರ: ಅತೀ ಹಿಂದುಳಿದ ಸಮಾಜವಾಗಿರುವ ಕೋಲಿ, ಕಬ್ಬಲಿಗ, ಬೆಸ್ತ ಅಂಬಿಗ ಜಾತಿಗಳನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸಲು ಕುಲಶಾಸ್ತ್ರೀಯ ಅಧ್ಯಯನದ ವರದಿಯೊಂದಿಗೆ ಕೇಂದ್ರ ಸರ್ಕಾರಕ್ಕೆ ಹೊಸದಾಗಿ ಶಿಫಾರಸ್ಸು ಪತ್ರ ಕಳುಹಿಸಿ ಸಮಾಜಕ್ಕೆ ಸಂವಿಧಾನಬದ್ಧವಾದ ಸಾಮಾಜಿಕ ನ್ಯಾಯ, ಹಕ್ಕು ಒದಗಿಸಿಕೊಡಬೇಕು ಎಂದು ಆಗ್ರಹಿಸಿ ಕೋಲಿ ಸಮಾಜದ ತಾಲೂಕು ಅಧ್ಯಕ್ಷ ನಿಂಗಣ್ಣ ಹೆಗಲೇರಿ ಅವರ ನೇತೃತ್ವದಲ್ಲಿ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಿದರು.

ಕೋಲಿ ಸಮಾಜದ ಹಿರಿಯ ಮುಖಂಡ ಭೀಮಣ್ಣ ಸಾಲಿ ಮಾತನಾಡಿ, ಸಾಮಾಜಿಕ ವ್ಯವಸ್ಥೆಯಲ್ಲಿ ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ ಜಾತಿಗಳು ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ, ಔದ್ಯೋಗಿಕವಾಗಿ ಮತ್ತು ರಾಜಕೀಯವಾಗಿ ಅತ್ಯಂತ ಹಿಂದುಳಿದ ಜಾತಿಗಳಾಗಿವೆ, ಜನರು ಅತ್ಯಂತ ಕಡುಬಡತನದಿಂದ ಜೀವನ ಸಾಗಿಸುತ್ತಿದ್ದಾರೆ ಶ್ರಮಜೀವಿಗಳಾದ ಈ ಎಲ್ಲಾ ಜಾತಿಗಳ ಜನರು ಶ್ರಮಜೀವಿಗಳಾಗಿದ್ದಾರೆ. ಕೃಷಿ ಕಾರ್ಮಿಕರಾಗಿ, ಕೂಲಿಕಾರರಾಗಿ, ಕಟ್ಟಡ ನಿರ್ಮಾಣ ಕಾರ್ಮಿಕರಾಗಿ, ಉದ್ಯೋಗ ಖಾತರಿ ಕಾರ್ಮಿಕರಾಗಿ, ಮೀನು ಹಿಡಿಯುವ, ದೋಣಿ ನಡೆಸುವ ಕಾಯಕ ಮಾಡಿ ಜೀವನ ರೂಪಿಸಿಕೊಳ್ಳುತ್ತಿದ್ದಾರೆ. ಈ ಎಲ್ಲಾ ಜಾತಿಗಳು ಪ್ರವರ್ಗ-1 ರಲ್ಲಿವೆ ಕಳೆದ 11 ಏಪ್ರಿಲ್ 2002 ರಲ್ಲಿ ಕರ್ನಾಟಕ ಸರ್ಕಾರ ಪ್ರಕಟಿಸಿರುವ ರಾಜ್ಯಪತ್ರದ ಪ್ರಕಾರ ಜಾತಿ ಪಟ್ಟಿಯಲ್ಲಿ ಕ್ರಮ ಸಂಖ್ಯೆ 6(ಎ) ಬೆಸ್ತ, ಮತ್ತು ಬೆಸ್ತ ಜಾತಿಯ ಉಪ ಜಾತಿಗಳಾದ ಕಬ್ಬಲಿಗ (ವಿ), ಕೋಲಿ ಕೋಳಿ (ಝಡ್), ಅಂಬಿಗ (ಬಿ) ಜಾತಿಗಳು ರಾಜ್ಯ ಸರ್ಕಾರದ ಮೀಸಲಾತಿ ಪಟ್ಟಿಯ ಪ್ರಕಾರ ಪ್ರವರ್ಗ-1ರಲ್ಲಿವೆ, ನೂರಾರು ಜಾತಿಗಳ ಪಟ್ಟಿಯಲ್ಲಿ ಈ ಜಾತಿಗಳಿವೆ. ಸರ್ಕಾರದ ಜಾತಿ ಪಟ್ಟಿಯ ಪ್ರಕಾರ ಸರ್ಕಾರದ ಮೀಸಲಾತಿಯೂ ನಾಲ್ಕು ಜಾತಿಗಳಿಗೆ ಕೇವಲ ಮರೀಚಿಕೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಂವಿಧಾನಬದ್ಧವಾಗಿ, ಈಗಿರುವ ಮೀಸಲಾತಿ ಪ್ರಕಾರ ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ ಮೀಸಲಾತಿ ಸೌಲಭ್ಯ ಪಡೆಯಲು ಸಾಧ್ಯವಾಗುತ್ತಿಲ್ಲ. ಕಲ್ಯಾಣ ಕರ್ನಾಟಕ ಭಾಗದಲ್ಲಿನ ಕಲಬುರಗಿ, ಬೀದರ, ಯಾದಗಿರಿ, ಕೊಪ್ಪಳ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ ಜಾತಿಯ ಜನರು ಅಧಿಕ ಸಂಖ್ಯೆಯಲ್ಲಿದ್ದಾರೆ. ಈ ಎಲ್ಲಾ ಜಾತಿಗಳನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸುವುದು ಅತ್ಯಂತ ಅವಶ್ಯಕವಾಗಿದೆ. ಆ ಮೂಲಕ ಜನರು ಸಮಗ್ರವಾಗಿ ಅಭಿವೃದ್ಧಿ ಹೊಂದಲು, ಸಮಾನತೆಯಿಂದ ಮತ್ತು ಗೌರವಯುತವಾಗಿ ಬದುಕು ಕಟ್ಟಿಕೊಳ್ಳಲು ಸಹಾಯಕವಾಗುತ್ತದೆ. ಕೋಲಿ ಸಮಾಜಕ್ಕೆ ಸಾಮಾಜಿಕ ನ್ಯಾಯ ಒದಗಿಸಿಕೊಡುವ ಜವಾಬ್ದಾರಿ ಸರ್ಕಾರದ ಮೇಲಿದೆ ಎಂದು ಹೇಳಿದರು.

ಕೋಲಿ ಸಮಾಜದ ಗೌರವಾಧ್ಯಕ್ಷ ರಾಮಲಿಂಗ ಬಾನರ್‌ ಮಾತನಾಡಿ, ಕಳೆದ 1996 ರಲ್ಲಿ ಕೋಲಿ ಸಮಾಜದ ಹೋರಾಟಗಾರ ದಿ. ವಿಠಲ್ ಹೇರೂರ ಅವರ ನೇತೃತ್ವದಲ್ಲಿ ಹೋರಾಟದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸುವಂತೆ ನಿರಂತರ ಹೋರಾಟ ಮಾಡುತ್ತಾ ಬರಲಾಗಿದೆ. ಕಳೆದ 2014 ರಲ್ಲಿ ರಾಜ್ಯ ಸರ್ಕಾರವು ಕುಲಶಾಸ್ತ್ರೀಯ ಅಧ್ಯಯನದ ವರದಿಯೊಂದಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು. ಸೂಕ್ತ ದಾಖಲೆಗಳು ಇಲ್ಲ ಎಂದು ಕೇಂದ್ರ ಸರ್ಕಾರದ ಬುಡಕಟ್ಟು ಸಚಿವಾಲಯ 2017 ರಲ್ಲಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ ಮತ್ತೆ 2021ರಲ್ಲಿ ರಾಜ್ಯ ಸರ್ಕಾರ ಹೆಚ್ಚುವರಿ ವಿವರಗಳೊಂದಿಗೆ ಕೇಂದ್ರಕ್ಕೆ ಪತ್ರ ಬರೆದು ಮರುಪರಿಶೀಲನೆಗೆ ಒತ್ತಾಯಿಸಿತ್ತು. ಸಮಾಜದ ಕೋರಿಕೆಯನ್ನು ಆ‌ರ್.ಜಿ.ಐ ತಿರಸ್ಕರಿಸಿದೆ ಎಂದು ಕೇಂದ್ರ ಸರ್ಕಾರ 2017 ರಲ್ಲಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ತಿಳಿಸಿದೆ. ಮತ್ತೇ 2018 ರಲ್ಲಿ ರಾಜ್ಯ ಸರ್ಕಾರವು ‌ಹೆಚ್ಚುವರಿ‌ ಮಾಹಿತಿ ಸೂಕ್ತ ದಾಖಲೆಗಳೊಂದಿಗೆ ಕೇಂದ್ರಕ್ಕೆ ಪತ್ರ ಬರೆದು ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ ಜಾತಿಗಳನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸುವಂತೆ ಶಿಫಾರಸ್ಸು ಮಾಡಿದೆ. ಕ್ರಿ.ಶ 1881 ರಿಂದ 1931 ರವರೆಗೆ ಬ್ರಿಟಿಷ್ ಭಾರತ ಸರ್ಕಾರ ಭಾರತದಲ್ಲಿ ಕೈಗೊಂಡಿರುವ ಜನಗಣತಿಗಳಲ್ಲಿ ಉಲ್ಲೇಖಿಸಿರುವ ಬೆಸ್ತ, ಕೋಲಿ, ಕಬ್ಬಲಿಗ, ಅಂಬಿಗ ಜಾತಿಗಳು ಬುಡಕಟ್ಟು ಜನಾಂಗದ ಗುಣಲಕ್ಷಣಗಳು ಹೊಂದಿವೆ ಎಂಬ ಉಲ್ಲೇಖದೊಂದಿಗೆ 2021 ರಲ್ಲಿ ರಾಜ್ಯ ಸರ್ಕಾರ ಮತ್ತೆ ದಾಖಲೆಗಳೊಂದಿಗೆ ಕೇಂದ್ರಕ್ಕೆ ಪತ್ರ ಬರೆದಿದೆ. ಕಳೆದ ನಾಲ್ಕು ದಶಕಗಳಿಂದ ನಿರಂತರ ಹೋರಾಟ, ಪ್ರತಿಭಟನೆ, ಮನವಿ ಸಲ್ಲಿಕೆ ಮಾಡುತ್ತಾ ಬಂದರೂ ಸಹ ಇಲ್ಲಿಯವರೆಗೆ ಕೋಲಿ ಸಮಾಜದ ಬೇಡಿಕೆ ಈಡೇರಿಕೆಯಾಗಿಲ್ಲ ಎಂದು ನೋವಿನಿಂದ ಹೇಳಬೇಕಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಹಿಂದುಳಿದ ಜಾತಿಗಳ ಸ್ಥಿತಿಗತಿಯ ಸಂಪೂರ್ಣ ಇತಿಹಾಸ, ಮಾಹಿತಿ ಹೊಂದಿರುವ ತಾವು ದಯಮಾಡಿ ಹಿಂದುಳಿದ ಜಾತಿಗಳಾದ ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ ಜಾತಿಗಳಿಗೆ ಸಾಮಾಜಿಕ ನ್ಯಾಯ ಒದಗಿಸಿಕೊಡಲು ಮುಂದಾಗಬೇಕು. ನಾಲ್ಕು ಜಾತಿಗಳನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸುವಂತೆ ಈ ಹಿಂದಿನಂತೆ ಯಾವುದೇ ರೀತಿಯ ಲೋಪದೋಷವಾಗದಂತೆ ಕೇಂದ್ರ ಬುಡಕಟ್ಟು ಸಚಿವಾಲಯದ ನಿಯಮಗಳಂತೆ, ಭಾರತ ಸರ್ಕಾರದ ಆ‌ರ್.ಜಿ.ಐ ನಿಯಮಗಳಂತೆ ಅವಶ್ಯಕವಾದ ಸಮಗ್ರ ವಿವರಣೆಯುಳ್ಳ ಮಾಹಿತಿ, ಸೂಕ್ತ ದಾಖಲೆಗಳು ಹಾಗೂ ಕುಲಶಾಸ್ತ್ರೀಯ ಅಧ್ಯಯನದ ವರದಿಯೊಂದಿಗೆ ಸಂಪೂರ್ಣ ಹೊಸದಾಗಿ ಕೇಂದ್ರ ಸರ್ಕಾರಕ್ಕೆ ಹೊಸ ಪ್ರಸ್ತಾವನೆ ಸಲ್ಲಿಸುವ ಮೂಲಕ ಶಿಫಾರಸ್ಸು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಕೋಲಿ ಸಮಾಜದ ನಗರಾಧ್ಯಕ್ಷ ಪ್ರಭು ಹಲಕರ್ಟಿ, ತಾಲೂಕು ಯುವ ಅಧ್ಯಕ್ಷ ರಾಜೇಶ ಹೋಳಿಕಟ್ಟಿ, ನಗರ ಯುವ ಅಧ್ಯಕ್ಷ ಬಸವರಾಜ ಮೈನಾಳಕ‌ರ್, ಮುಖಂಡರಾದ ಬಸವರಾಜ ಚೆನ್ನಮಳ್ಳಿ, ಸುರೇಶ ಬೆನಕನಳ್ಳಿ, ಮಲ್ಲಿಕಾರ್ಜುನ ಎಮ್ಮೆನೋರ್, ಹಣಮಂತ ಸಂಕನೂರು, ದೇವಿಂದ್ರ ಅರಣಕಲ್, ಮುನಿಯಪ್ಪ ಕೊಳ್ಳಿ, ಮಲ್ಲಿಕಾರ್ಜುನ ಸಂಗಾವಿ, ಭೀಮಣ್ಣಾ ಹೊತಿನಮಡಿ ಸೇರಿದಂತೆ ಕೋಲಿ ಸಮಾಜದ ಅನೇಕ ಮುಖಂಡರು ಹಾಗೂ ಪದಾಧಿಕಾರಿಗಳು ಇದ್ದರು.

ವರದಿ ಮೊಹಮ್ಮದ್ ಅಲಿ, ಚಿತ್ತಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ