ಬಳ್ಳಾರಿ / ಕಂಪ್ಲಿ : ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಮೇಕೆದಾಟು ಬಳಿ ಕಾವೇರಿ ನದಿಗೆ ಅಡ್ಡವಾಗಿ ನಿರ್ಮಿಸಲು ಉದ್ದೇಶಿರುವ ಮೇಕೆದಾಟು ಅಣೆಕಟ್ಟೆ ಯೋಜನೆ ಜಾರಿಗೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮಾರ್ಚ್ 21 ಮತ್ತು 22 ರಂದು ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ರವರ ನೇತೃತ್ವದಲ್ಲಿ ವಿಧಾನಸೌಧ ಚಲೋ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ’ ಎಂದು ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ವೇದಿಕೆಯ ತಾಲೂಕ ಅಧ್ಯಕ್ಷ ಬಿ. ರಮೇಶ ರವರು ಹೇಳಿದರು.
ಮೇಕೆದಾಟು ಎಂದರೆ ಆಡಿನ ಜಿಗಿತ, ಇದು ಕಾವೇರಿ ಮತ್ತು ಅದರ ಉಪನದಿ ಅರ್ಕಾವತಿ ನದಿಗಳ ಸಂಗಮವಾಗಿದ್ದು ಬೆಂಗಳೂರು ನಗರ, ರಾಮನಗರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ದೇವನಹಳ್ಳಿ ಸೇರಿದಂತೆ ನಾನಾ ಪ್ರದೇಶಗಳಲ್ಲಿ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತದೆ. ಆದರೂ ಬಜೆಟ್‌ನಲ್ಲಿಯೂ ಸಹ ಮೇಕೆದಾಟು ಯೋಜನೆಗೆ ಯಾವುದೇ ಅನುದಾನ ಮೀಸಲಿಟ್ಟಿಲ್ಲ’ ಎಂದರು.
‘ರಾಮನಗರದ ಕೆಂಪೇಗೌಡ ವೃತ್ತದಿಂದ ಶುರುವಾಗಲಿರುವ ಪಾದಯಾತ್ರೆಯು ಎರಡು ದಿನದಲ್ಲಿ ಬೆಂಗಳೂರು ತಲುಪಲಿದೆ. ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಯೋಜನೆ ಜಾರಿಗೆ ಆಗ್ರಹಿಸಿ ಹಕ್ಕೊತ್ತಾಯ ಮಾಡಲಾಗುವುದು’ ಇದಕ್ಕಾಗಿ ನಮ್ಮ ಕಂಪ್ಲಿ ತಾಲೂಕಿನಿಂದ ಕಾರ್ಯಕರ್ತರು ಭಾಗವಹಿಸುತ್ತೇವೆ ಎಂದು ಅವರು ತಿಳಿಸಿದರು.
ವರದಿ : ಜಿಲಾನ್ ಸಾಬ್ ಬಡಿಗೇರ
