ಕಲಬುರಗಿ: ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹಾಗೂ ಇತರೆ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಕನ್ನಡ ಭೂಮಿ ಜಾಗೃತಿ ಸಮಿತಿ ಬೆಂಬಲಿಸುವುದಿಲ್ಲ ಎಂದು ಸಮಿತಿಯ ವಕ್ತಾರ ಆನಂದ ತೆಗನೂರ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬೆಳಗಾವಿಯಲ್ಲಿ ಎಂ.ಇ.ಎಸ್ ಪುಂಡಾಟಿಕೆ ವಿರೋಧಿಸಿ ರಾಜ್ಯ ಬಂದ್ ಗೆ ಕರೆ ಕೊಟ್ಟಿದ್ದಾರೆ. ಇಲ್ಲಿಯ ಕನ್ನಡಪರ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಹಾಗೂ ಸಂಪರ್ಕಿಸದೇ ಕೇವಲ ಬೆಂಗಳೂರಿನಲ್ಲಿ ಕುಳಿತುಕೊಂಡು ಬಂದಗೆ ಕರೆ ಕೊಟ್ಟಿರುವುದು ಸರಿಯಲ್ಲ. ಕಲ್ಯಾಣ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಒಮ್ಮೆಯೂ ಧ್ವನಿ ಎತ್ತದವರು ಕೇವಲ ತಮ್ಮ ಅಸ್ತಿತ್ವಕ್ಕಾಗಿ ಮತ್ತು ಪ್ರಚಾರಕ್ಕೆ ಇತರೆ ಕನ್ನಡ ಪರ ಸಂಘಟನೆಗಳನ್ನು ಬಳಸಿಕೊಳ್ಳುವ ನೀಚತನಕ್ಕೆ ಮಣಿಯುವುದಿಲ್ಲ. ಇಂಥ ನಡೆಯನ್ನು ವಿರೋಧಿಸಿ ಶನಿವಾರ ಕರೆ ಕೊಟ್ಟಿರುವ ಕರ್ನಾಟಕ ಬಂದ್ ಗೆ ಕನ್ನಡ ಭೂಮಿ ಜಾಗೃತಿ ಸಮಿತಿ ಬೆಂಬಲಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
- ಕರುನಾಡ ಕಂದ
