ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ದಿ.೨೧.೦೩.೨೦೨೫ ರಂದು ಬೆಳಿಗ್ಗೆ 10 ಗಂಟೆಗೆ, ಆಂತರಿಕ ಭರವಸಾ ಕೋಶ, ಮತ್ತು ಕನ್ನಡ ವಿಭಾಗದ ಸಂಯುಕ್ತ ಆಶ್ರಯದಲ್ಲಿ, “ಹಳೆಗನ್ನಡ ಸಾಹಿತ್ಯದಲ್ಲಿ ಮಾನವೀಯ ಮೌಲ್ಯಗಳು” ವಿಷಯ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮವಿರುತ್ತದೆ.
ಈ ವಿಚಾರ ಸಂಕಿರಣ ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಪ್ರಾಂಶುಪಾಲರಾದ
ಡಾ.ಗಣಪತಿ ಲಮಾಣಿ,ವಹಿಸಲಿದ್ದು,
ವಿಚಾರ ಸಂಕಿರಣದ ಮುಖ್ಯ
ಸಂಪನ್ಮೂಲ ವ್ಯಕ್ತಿಗಳಾಗಿ ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಮಾಧವ ಪೆರಾಜೆ, ಅವರು ಹಳೆಗನ್ನಡ ಸಾಹಿತ್ಯದಲ್ಲಿ ಮಾನವೀಯ ಮೌಲ್ಯಗಳು, ಕುರಿತು ಮಾತನಾಡಲಿದ್ದಾರೆ ಎಂದು ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ಹುಲಿಗೆಮ್ಮ .ಬಿ.ಅವರು ತಿಳಿಸಿದ್ದಾರೆ, ಕಾರ್ಯಕ್ರಮಕ್ಕೆ ಎಲ್ಲಾ ವಿಭಾಗದ ಪ್ರಾಧ್ಯಾಪಕರು, ಅತಿಥಿ ಉಪನ್ಯಾಸಕರು , ವಿದ್ಯಾರ್ಥಿನಿಯರು ಆಗಮಿಸುವ ಮೂಲಕ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾಗಬೇಕೆಂದು ಕೋರಿದ್ದಾರೆ.
–
– ಕರುನಾಡ ಕಂ
ದ
