ಬಳ್ಳಾರಿ / ಕಂಪ್ಲಿ: ಎಸ್. ಎಸ್. ಎಲ್. ಸಿ. ಪರೀಕ್ಷೆ ಇಂದು ಶುಕ್ರವಾರ (ಮಾರ್ಚ್21 ರಿಂದ ಏಪ್ರಿಲ್ 04ರ ವರೆಗೆ ) ಆರಂಭವಾಗಿದ್ದು, ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ
ಮೊದಲ ದಿನ ಪ್ರಥಮ ಭಾಷೆ ಕನ್ನಡ / ಇಂಗ್ಲಿಷ ವಿಷಯದ ವೆಬ್‌ಕಾಸ್ಟಿಂಗ್ ವ್ಯವಸ್ಥೆಯಲ್ಲಿ ಶಾಂತಿಯುತವಾಗಿ ನಡೆಯಿತು. ನಕಲು ತಡೆ ಹಾಗೂ ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಅವರು ಮಾಹಿತಿ ನೀಡಿದ್ದರು.
ಇಂದು ನಡೆದ ಕಂಪ್ಲಿ ತಾಲೂಕಿನ ಒಟ್ಟು ಆರು ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ಕಟ್ಟಿದ ಒಟ್ಟು ವಿದ್ಯಾರ್ಥಿಗಳು 1951 ಇದರಲ್ಲಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಒಟ್ಟು 1925 ವಿದ್ಯಾರ್ಥಿಗಳು.
26 ವಿದ್ಯಾರ್ಥಿಗಳು ಗೈರು ಆಗಿದ್ದಾರೆ ಎಂದು ತಿಳಿಸಿದರು. ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿತ್ತು.
ವರದಿ : ಜಿಲಾನ್ ಸಾಬ್ ಬಡಿಗೇರ
