ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

“ವಿಫಲತೆಗಳ ಬಗ್ಗೆ ಚಿಂತಿಸದಿರಿ” ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕಾರಿಸಿ : ಎ.ವೆಂಕಟರಮಣಯ್ಯ

ಬಳ್ಳಾರಿ / ಕಂಪ್ಲಿ : ಗ್ರಾಮೀಣ ಭಾಗದ ಮಕ್ಕಳ ಪ್ರತಿಭೆ ಅನಾವರಣಗೊಳಿಸಲು ಕಲಿಕಾ ಹಬ್ಬ ಸೂಕ್ತ ವೇದಿಕೆ ಎಂದು ಗ್ರಾಪಂ ಅಧ್ಯಕ್ಷ ಎ. ವೆಂಕಟರಮಣಯ್ಯ ಅಭಿಪ್ರಾಯಪಟ್ಟರು.
ತಾಲೂಕಿನ ಸಣಾಪುರ ಗ್ರಾ.ಪಂ.ಯ ವ್ಯಾಪ್ತಿಯ ಇಟಗಿ ಗ್ರಾಮದ ಸರ್ಕಾರಿ ಹಿರಿಯ ಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪಠ್ಯದ ಜತೆಗೆ ಪತ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ನಿರಂತರವಾಗಿ ಕಲಿಯುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು. ಕಲಿಕಾ ಹಬ್ಬವು ಮಕ್ಕಳಲ್ಲಿ ಹೊಸ ಉತ್ಸಾಹ ಮೂಡಿಸುತ್ತದೆ. ಮಕ್ಕಳಿಗೆ ಪ್ರಶ್ನೆ ಮಾಡುವ ಹಾಗೂ ಶೈಕ್ಷಣಿಕ ಮನೋಭಾವ ವೃದ್ಧಿಸುವ ಜತೆಗೆ ಭಾವೈಕ್ಯ ಮೂಡಿಸಲು ಸಹಕಾರಿಯಾಗುತ್ತದೆ ಎಂದರು.
ಮುಖ್ಯಗುರು ಚಂದ್ರಯ್ಯ ಸೊಪ್ಪಿನಮಠ ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ಕಾರ ಶಿಕ್ಷಣ ಇಲಾಖೆಯ ಮೂಲಕ ಶಿಕ್ಷಣಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿನೂತನ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಶಾಲೆಗಳಲ್ಲಿ ಆಯೋಜಿಸುವ ಕಲಿಕಾ ಹಬ್ಬ ಕಾರ್ಯಕ್ರಮ ಮಕ್ಕಳಲ್ಲಿ ಶೈಕ್ಷಣಿಕ ಬಲವರ್ಧನೆ ಹಾಗೂ ಸಾಕ್ಷರತೆ ಮತ್ತು ಸಂಖ್ಯಾ ಜ್ಞಾನ ವೃದ್ಧಿಸುತ್ತದೆ. ಇದಲ್ಲದೆ ಮಕ್ಕಳ ಪ್ರತಿಭೆ ಗುರುತಿಸಲು ಸೂಕ್ತ ವೇದಿಕೆ ಕಲ್ಪಿಸುತ್ತದೆ. ಇಂತಹ ಕಾರ್ಯಕ್ರಮಗಳನ್ನು ಮಕ್ಕಳು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಕಲಿಕ ಹಬ್ಬದಲ್ಲಿ ಗಟ್ಟಿ ಓದು, ಸುಂದರ ಕೈಬರಹ, ಸ್ಮರಣೆ ಶಕ್ತಿ, ಮೋಜಿನ ಗಣಿತ, ಕಥೆ ಹೇಳುವುದು, ಪೋಷಕ ಸಹ ಸಂಬಂಧದ ವಲಯ, ರಸ ಪ್ರಶ್ನೆ, ಹೀಗೆ 7 ಸ್ಪರ್ಧೆಗಳು ಜರುಗಿದವು.
ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಎಂ.ತೋಟಪ್ಪ, ಇಸಿಒ ರೇವಣ್ಣ, ಸಾವಿತ್ರಿಬಾಯಿ ಪುಲೆ ಅಧ್ಯಕ್ಷೆ ಸುನಿತಾ ಪೂಜಾರಿ, ಕರ್ನಾಟಕ ರಾಜ್ಯ ಎನ್‌ಪಿಎಸ್ ನೌಕರರ ಸಂಘದ ರಾಜ್ಯಾಧ್ಯಕ್ಷ ನಾಗನಗೌಡ ಎಂ.ಎ, ಸಿಆರ್‌ಪಿ ರೇಣುಕಾರಾಧ್ಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಖಜಾಂಚಿ ರಾಜೇಶ್ವರಿ, ಮುಖಂಡ ದಾದಾ ಖಲಂದರ್, ಪಂಪಾನಗೌಡ, ಕೆ.ಮಾಬುಸುಭಾನಿ ಸೇರಿದಂತೆ 10 ಶಾಲೆಗಳ ಮಕ್ಕಳು ಭಾಗವಹಿಸಿದ್ದರು.

ವರದಿ : ಜಿಲಾನ್ ಸಾಬ್ ಬಡಿಗೇರ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ