ಚಾಮರಾಜನಗರ/ ಹನೂರು: ಪಟ್ಟಣದ ಆರ್ ಎಂ ಸಿ ಆವರಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕಾಮಗಾರಿಗೆ ಶಾಸಕ ಎಂ.ಆರ್ ಮಂಜುನಾಥ್ ಗುದ್ದಲಿ ಪೂಜೆ ನೆರವೇರಿಸಿದರು.
ಹನೂರು : 2024-25 ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆಯಲ್ಲಿ ಅನುಮೋದಿಸಿದ್ದು ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾoಗಣದಲ್ಲಿ 4 ಲಕ್ಷದ 80 ಸಾವಿರ ರೂ ಅನುದಾನದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಕಾಮಗಾರಿಗೆ ಕ್ಷೇತ್ರದ ಶಾಸಕ ಎಂ ಆರ್ ಮಂಜುನಾಥ್ ರವರು ಗುದ್ದಲಿ ಪೂಜೆ ನೇರವೇರಿಸಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷೆ ಮುಮ್ತಾಜ್ ಬಾನು, ಉಪಾಧ್ಯಕ್ಷ ಆನಂದ್, ಸದಸ್ಯರುಗಳಾದ ಮಹೇಶ್ ನಾಯಕ, ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಮಂಜೇಶ್ ಗೌಡ, ಪ್ರಸನ್ನ, ಮುಖಂಡರುಗಳಾದ ಕೇಬಲ್ ರಾಜು, ವಿಜಯ್ ಕುಮಾರ್, ಅಮೀನ್, ರಾಹಿಲ್, ನಿಂಗರಾಜು, ಗೋವಿಂದ, ವೆಂಕಟೇಶ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ವರದಿ ಉಸ್ಮಾನ್ ಖಾನ್
