ಚಾಮರಾಜನಗರ/ಹನೂರು – ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಉಪ ವಿಭಾಗ ವ್ಯಾಪ್ತಿಯ ರಾಮಾಪುರ ಮತ್ತು ಮಾರ್ಟಳ್ಳಿ ಶಾಖಾ ವ್ಯಾಪ್ತಿಯಲ್ಲಿ ಮಾ.23 ರಂದು ತ್ರೈ ಮಾಸಿಕ ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ಆ ದಿನದಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಬಿ.ರಂಗಸ್ವಾಮಿ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಮಾಪುರ ಮತ್ತು ಮಾರ್ಟಳ್ಳಿ 66/11 ಕೆವಿ ವಿದ್ಯುತ್ ಸರಬರಾಜು ವಿತರಣಾ ಕೇಂದ್ರದಿಂದ ಹೊರ ಬರುವ ಫೀಡರ್ ವ್ಯಾಪ್ತಿಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಹಾಗಾಗಿ ಗ್ರಾಹಕರು ಸಾರ್ವಜನಿಕರು ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ಕೋರಲಾಗಿದೆ.
ವರದಿ ಉಸ್ಮಾನ್ ಖಾನ್
