ಬಳ್ಳಾರಿ / ಕಂಪ್ಲಿ : ಎಮ್ಮಿಗನೂರ ಗ್ರಾಮದ ಶ್ರೀ ಜನಿಸಿದ್ದೇಶ್ವರ ಎಜುಕೇಶನಲ್ ಟ್ರಸ್ಟ್ನಿಂದ ಭಾನುವಾರ ಭಗತ್ ಸಿಂಗ್ ರಾಜಗುರು ಸುಖದೇವ್ ಅವರ ಬಲಿದಾನ ದಿವಸ ಆಚರಿಸಲಾಯಿತು.
ಈ ವೇಳೆ ಟ್ರಸ್ಟ್ ಅಧ್ಯಕ್ಷ ಎಸ್. ರಾಮು ಮಾತನಾಡಿ ಸ್ವಾತಂತ್ರ ಹೋರಾಟದಲ್ಲಿ ಈ ಮೂವರು ಕ್ರಾಂತಿಕಾರಿಗಳು ಬ್ರಿಟಿಷರಿಗೆ ಸಿಂಹ ಸ್ವಪ್ನರಾಗಿದ್ದರು ಚಿಕ್ಕ ವಯಸ್ಸಿನಲ್ಲಿ ದೇಶಕ್ಕಾಗಿ ತಮ್ಮ ಪ್ರಾಣವನ್ನು ಅರ್ಪಿಸಿದ ಇಂತಹ ನಾಯಕರ ಆದರ್ಶಗಳನ್ನು ಪ್ರತಿಯೊಬ್ಬ ಯುವಕರು ಪ್ರಸ್ತುತ ದಿನಮಾನದಲ್ಲಿ ಮೈಗೂಡಿಸಿಕೊಳ್ಳಬೇಕು. ಬ್ರಿಟಿಷರ ದಾಸ್ಯದಲ್ಲಿದ್ದ ಭಾರತ ಮಾತೆಯ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ ತರುಣ ಭಗತ್ ಸಿಂಗ್, ಸುಖ್‌ದೇವ್ ಹಾಗೂ ರಾಜ್‌ಗುರು ನುಗುತ್ತಲೇ ನೇಣುಗಂಬಕ್ಕೇರಿದ ದಿನ. ಈ ಮಹಾನ್ ಕ್ರಾಂತಿಕಾರಿಗಳನ್ನು ಇಂದು ಇಡೀ ದೇಶ ನೆನೆದು ಗೌರವಿಸಿದೆ ಎಂದರು.
ಈ ಸಂದರ್ಭದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳು ಸೇರಿದಂತೆ ಮಕ್ಕಳು ಇತರರು ಇದ್ದರು.
ವರದಿ : ಜಿಲಾನ್ ಸಾಬ್ ಬಡಿಗೇರ
