
ಬಳ್ಳಾರಿ : ಜಿಲ್ಲೆಯಲ್ಲಿ ಸಮಾಜದ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಕಾರ್ಯನಿರ್ವಹಿಸುವ ಪೊಲೀಸರೊಂದಿಗೆ ಸಾರ್ವಜನಿಕರು ಉತ್ತಮ ಭಾಂದವ್ಯವನ್ನಿರಿಸಿಕೊಂಡು ಅವರ ಕರ್ತವ್ಯಕ್ಕೆ ಸಹಕಾರ ನೀಡಿದರೆ ಸುಸ್ಥಿರ ಸಮಾಜ ನಿರ್ಮಾಣ ಮಾಡಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾ ರಾಣಿ ಹೇಳಿದರು.
ನಗರದ ಪೊಲೀಸ್ ಕಲ್ಯಾಣ ಭವನದಲ್ಲಿ ಹಮ್ಮಿಕೊಂಡ ಪೊಲೀಸ್ ಕ್ರೀಡಾಂಗಣದಲ್ಲಿ ಮಾರ್ಚ್ 23 ರಿಂದ ಮಾರ್ಚ್ 25 ರವರೆಗೆ ಆಯೋಜಿಸಿದ್ದ 13ನೇ ನಾಗರಿಕ ಬಂದೂಕು ಶಿಬಿರದ ಸಮಾರೋಪ ಸಮಾರಂಭ ಮತ್ತು ಯಶಸ್ವಿಯಾಗಿ ಬಂದೂಕು ತರಬೇತಿ ಪೂರ್ಣಗೊಳಿಸಿದ ನಾಗರಿಕರಿಗೆ ಪ್ರಶಸ್ತಿ ಪತ್ರ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ
ಇಲಾಖೆಯು ಭದ್ರತೆ ಹಾಗೂ ರಕ್ಷಣೆ ಜೊತೆಗೆ ಸಮಾಜದಲ್ಲಿ ಶಾಂತಿ ಸ್ಥಾಪಿಸಲು ನಿಷ್ಠೆಯಿಂದ ಕರ್ತವ್ಯದಲ್ಲಿ ತೊಡಗಿಕೊಂಡಿದೆ. ಪ್ರತಿಯೊಬ್ಬ ನಾಗರಿಕನೂ ಕಾನೂನು ಅರಿತು, ಪಾಲಿಸಿದಲ್ಲಿ ಅಪರಾಧ ಸಂಖ್ಯೆ ಕ್ಷೀಣಿಸುವುದರೊಂದಿಗೆ ಉತ್ತಮ ಸಮಾಜ ನಿರ್ಮಾಣವಾಗುತ್ತದೆ ಎಂದರು. ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿವೆ. ಸಮಾಜದ ಎಲ್ಲಾ ಸ್ಥಿತಿಗತಿಗಳು, ಆಗು-ಹೋಗುಗಳನ್ನು ಸ್ಫಷ್ಟವಾಗಿ ಅರಿತ ವಿದ್ಯಾವಂತರೇ ಇವತ್ತು ಡಿಜಿಟಲ್ ಕ್ರೈಮ್ ನಲ್ಲಿ ಹಣವನ್ನು ಕಳೆದುಕೊಳ್ಳುತ್ತಿದ್ದಾರೆ. ಬಂದೂಕು ತರಬೇತಿಯೊಂದಿಗೆ ಪರವಾನಗಿ ಪಡೆದು ಬಂದೂಕುಗಳನ್ನು ಬಳಕೆ ಮಾಡುವ ಪ್ರತಿಯೊಬ್ಬರೂ ಅದರ ಸುರಕ್ಷತೆ ಬಗ್ಗೆ ಹೆಚ್ಚು ಗಮನ ವಹಿಸಬೇಕು. ಬಂದೂಕುಗಳನ್ನು ಕೇವಲ ತಮ್ಮ ರಕ್ಷಣೆಗೆ ಮಾತ್ರ ಬಳಸಿಕೊಳ್ಳಿ ಯಾವುದೇ ಕಾನೂನು ಬಾಹಿರ ಕಾರ್ಯಗಳಲ್ಲಿ ತೊಡಗಿಕೊಳ್ಳದೇ ಹಾಗೂ ತಮ್ಮ ಬಂದೂಕುಗಳನ್ನು ಇತರರು ಬಳಕೆ ಮಾಡದಂತೆ ಎಚ್ಚರವಹಿಸಬೇಕು ಎಂದರು. ಐಜಿಪಿ ಬಿ.ಎಸ್. ಲೋಕೇಶ್ ಕುಮಾರ ಸೇರಿದಂತೆ ಜಿಲ್ಲಾ ಪೊಲೀಸ್ ಅಧಿಕಾರಿಗಳು ಸೇರಿದಂತೆ ಶಿಬಿರಾರ್ಥಿಗಳು ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.
ವರದಿ: ಜಿಲಾನ್ ಸಾಬ್ ಬಡಿಗೇರ
