ನವದೆಹಲಿ : ಬಿಜೆಪಿ ಪಕ್ಷಕ್ಕೆ ಬಿಸಿ ತುಪ್ಪವಾಗಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರನ್ನು ಕೊನೆಗೂ ಹೈಕಮಾಂಡ್ 6 ವರ್ಷಗಳ ಕಾಲ ಉಚ್ಛಾಟನೆ ಮಾಡಿದೆ. ಇದರೊಂದಿಗೆ ಯತ್ನಾಳ್ ಅವರು ಬಿಜೆಪಿಯಿಂದ ಉಚ್ಛಾಟನೆಯಾದ ವಿಚಾರವಾಗಿ ಹ್ಯಾಟ್ರಿಕ್ ಬಾರಿಸಿದಂತಾಗಿದೆ.
ಶಿಸ್ತು ಸಮಿತಿ ನೀಡಿದ್ದ ಶೋಕಾಸ್ ನೋಟಿಸ್‌ಗೆ ಸರಿಯಾಗಿ ಉತ್ತರ ನೀಡದ ಕಾರಣ ಬಿಜೆಪಿ ಹೈಕಮಾಂಡ್ ಈ ನಿರ್ಧಾರವನ್ನು ಕೈಗೊಂಡಿದೆ. ತಕ್ಷಣ ಈ ನಿರ್ಧಾರ ಜಾರಿಗೆ ಬಂದಿದ್ದು
ಬಿಜೆಪಿ ಶಿಸ್ತು ಸಮಿತಿ ಎರಡು ಬಾರಿ ನೋಟಿಸ್ ನೀಡಿತ್ತು. ನೋಟಿಸ್ ನೀಡಿದ್ದರೂ ಪದೇ ಪದೇ ಪಕ್ಷದ ವಿರೋಧಿ ಚಟುವಟಿಕೆ, ಪಕ್ಷದ ಶಿಸ್ತು ಉಲ್ಲಂಘನೆ. ಕೊನೆಗೆ ಫೆ.10 ರಂದು ಶೋಕಾಸ್ ನೋಟಿಸ್‌ಗೆ ಯತ್ನಾಳ್ ಉತ್ತರ ನೀಡಿದ್ದರು. ಯತ್ನಾಳ್ ಉತ್ತರ, ಸ್ಪಷ್ಟನೆ ಒಪ್ಪದ ಕೇಂದ್ರ ಶಿಸ್ತು ಸಮಿತಿ ಇಂದು ಈ ನಿರ್ಧಾರ ಕೈಗೊಂಡಿದೆ. ಯತ್ನಾಳ್ ನೇತೃತ್ವದಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಠಾವೋವನ್ನು ಭಿನ್ನಮತೀಯರು ನಡೆಸುತ್ತಿದ್ದರು. ಪಕ್ಷದ ವಿಚಾರವನ್ನು ಬಹಿರಂಗವಾಗಿ ಚರ್ಚಿಸಬೇಡಿ ಎಂದು ಬಿಜೆಪಿ ಸೂಚಿಸುತ್ತಿದ್ದರೂ ಪದೇ ಪದೇ ಉಲ್ಲಂಘನೆ ಮಾಡುತ್ತಿದ್ದರು. ಬಿಜೆಪಿಯಲ್ಲಿನ ಬಣ ಬಡಿದಾಟಕ್ಕೆ ಕೊನೆಗೂ ಹೈಕಮಾಂಡ್ ಬ್ರೇಕ್ ಹಾಕಿದೆ.
ವರದಿ : ಜಿಲಾನ್ ಸಾಬ್ ಬಡಿಗೇರ.
