ಶಿವಮೊಗ್ಗ: ಡಿ.ಸಿ.ಸಿ ಬ್ಯಾಂಕ್ ಹಾಗೂ ಸಹಕಾರ ಕ್ಷೇತ್ರಕ್ಕೆ ನೀಡಿದ ಕೊಡುಗೆ ಮತ್ತು ಪ್ರಗತಿಗೆ ಕಾರಣರಾದ ಶ್ರೀ ಆರ್ ಎಂ ಮಂಜುನಾಥ ಗೌಡರ ಸೇವೆಯನ್ನು ಗುರುತಿಸಿ ಸುವರ್ಣ ಸುದ್ದಿವಾಹಿನಿ ಹಾಗೂ ಕನ್ನಡಪ್ರಭ ದಿನಪತ್ರಿಕೆ ತಂಡದಿಂದ ಇತ್ತೀಚಿಗೆ ದುಬೈನಲ್ಲಿ ನಡೆದ ಸಮಾರಂಭದಲ್ಲಿ ಅಂತರಾಷ್ಟ್ರೀಯ ಐಕಾನ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಈ ಸಂಬಂಧ ದಿ. 27.03.2025 ರಂದು ನಡೆದ ಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿ ಸಭೆಯಲ್ಲಿ ಶ್ರೀ ಆರ್ ಎಂ ಎಂ ಅವರನ್ನು ಆಡಳಿತ ಮಂಡಳಿ ವತಿಯಿಂದ ಅಭಿನಂದಿಸಲಾಯಿತು ಎಂದು ಪ್ರಕಟಣೆ ತಿಳಿಸಿದೆ.
ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ
