ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಾನೂನು ಸುವ್ಯವಸ್ಥೆಯ ಕುರಿತಂತೆ ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಗೖಹ ಸಚಿವ ಡಾ.ಜಿ ಪರಮೇಶ್ವರ ಸೂಚಿಸಿದರು.
ಶೋಷಿತರಿಗೆ ಸಾಮಾಜಿಕ ನ್ಯಾಯ, ರಕ್ಷಣೆ ಒದಗಿಸುವುದು ನಮ್ಮ ಸರ್ಕಾರದ ಆದ್ಯ ಕರ್ತವ್ಯ. ಇದನ್ನರಿತು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ವರ್ಗವು ಹೆಚ್ಚು ಪರಿಣಾಮಕಾರಿ ಮತ್ತು ಜನಸ್ನೇಹಿಯಾಗಿ ಕೆಲಸ ಮಾಡಬೇಕು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿ ದಾಖಲಾಗುವ ಪ್ರಕರಣಗಳು ಹಾಗೂ ಪೋಕ್ಸೊ ಪ್ರಕರಣಗಳ ಶಿಕ್ಷೆ ಪ್ರಮಾಣವನ್ನು ಹೆಚ್ಚಿಸಬೇಕು. ತಪ್ಪಿತಸ್ಥರಿಗೆ ಶಿಕ್ಷೆ ಅಗುವ ನಿಟ್ಟಿನಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ತನಿಖೆ ಕೈಗೊಳ್ಳಬೇಕು. ಅಕ್ರಮ ಮದ್ಯ ಸಾಗಣೆ, ಡ್ರಗ್ಸ್ ಚಟುವಟಿಕೆಯನ್ನು ಸಂಪೂರ್ಣವಾಗಿ ಮಟ್ಟ ಹಾಕುವುದು ಧ್ಯೇಯೋದ್ದೇಶ. ಅನಧಿಕೃತ ಹೋಮ್ ಸ್ಟೇಗಳ ಮೇಲೆ ನಿಗಾವಹಿಸಿ ಸೂಕ್ತ ಕ್ರಮ ಜರುಗಿಸುವಂತೆ ಸೂಚಿಸಿದರು.
ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ
