ಬಳ್ಳಾರಿ / ಕಂಪ್ಲಿ : ರಂಜಾನ್ ಮತ್ತು ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಕಂಪ್ಲಿ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ಜರುಗಿತು.
ಡಿ ವೈ ಎಸ್ ಪಿ ಪ್ರಸಾದ್ ಗೋಖಲೆ ಮಾತನಾಡಿ ಹಬ್ಬವನ್ನು ಸಂಪ್ರದಾಯದಂತೆ ಶಾಂತಿಯುತವಾಗಿ ಆಚರಿಸಬೇಕು ಎಂದು ತಿಳಿಸಿದರು. ಹಬ್ಬದ ಪ್ರಯುಕ್ತ
ಪಟ್ಟಣವು ಕೋಮು ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು, ಮುಂದಿನ ದಿನಗಳಲ್ಲೂ ಅದೇ ರೀತಿ ಮುಂದುವರೆಸಿಕೊಂಡು ಹೋಗಬೇಕು. ಕಾನೂನು ಸುವ್ಯವಸ್ಥೆ ಧಕ್ಕೆ ಬರುವ ಸಂದರ್ಭ ಬಂದರೆ ಪೊಲೀಸರಿಗೆ ತಕ್ಷಣವೇ ಮಾಹಿತಿ ನೀಡಬೇಕು.
ಇದರಿಂದ ರಕ್ಷಣೆ ನೀಡಲು ಸಾಧ್ಯವಾಗುತ್ತದೆ. ಯಾವುದೇ ಸಂದರ್ಭದಲ್ಲಿ ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು, ರಂಜಾನ್ ಮತ್ತು ಯುಗಾದಿ ಹಬ್ಬದ ಪ್ರಯುಕ್ತ ಎಲ್ಲಾ ಸಮುದಾಯದ ಜನರು ಸೌಹಾರ್ದಯುತವಾಗಿ ಹಬ್ಬ ಆಚರಿಸಬೇಕು. ಯಾವುದೇ ಸ್ಥಳದಲ್ಲಿ ಅಕ್ರಮ ಜೂಜು, ಕಳ್ಳತನ ಕಂಡು ಬಂದರೆ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದರು.
ಪಿ ಐ ವಾಸುಕುಮಾರ ಮಾತನಾಡಿ, ಪಟ್ಟಣದಲ್ಲಿ ಕೆಲವು ಯುವಕರು ವಾಹನ ಚಾಲನೆ ಪರವಾನಗಿ ಇಲ್ಲದಿದ್ದರೂ ಬೈಕ್‌ನಲ್ಲಿ 3 ಜನರನ್ನು ಕೂರಿಸಿಕೊಂಡು ಅತಿ ವೇಗವಾಗಿ ಚಾಲನೆ ಮಾಡುತ್ತಾರೆ. ಇದಕ್ಕೆ ಕಡಿವಾಣ ಹಾಕಬೇಕು ಎಂದರು. ಸಭೆಯಲ್ಲಿ ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ ಮಾತನಾಡಿ ಈಗಾಗಲೇ ನಗರದ ಪ್ರಮುಖ ವೃತ್ತ ಹಾಗೂ ಸ್ಥಳಗಳಲ್ಲಿ ಸಿಸಿ
ಕ್ಯಾಮೆರಾವನ್ನು ಅಳವಡಿಸಲು 14 ಲಕ್ಷ ರೂಪಾಯಿಗಳಲ್ಲಿ ಕ್ರಿಯಾ ಯೋಜನೆ ತಯಾರಿಸಲಾಗಿದ್ದು ಮುಂದಿನ ದಿನಗಳಲ್ಲಿ ಹಾಕಲಾಗುವುದು ಇದರಿಂದ ಅಕ್ರಮಗಳಿಗೆ ಕಡಿವಾಣ ಹಾಕಿದಂತಾಗುತ್ತದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಯ ಪಿಎಸ್ಐ ಅವಿನಾಶ ಕಾಂಬಳೆ, ಎಲ್ಲಾ ಧರ್ಮದ ಮುಖ್ಯಸ್ಥರು ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರಿದ್ದರು.
ವರದಿ : ಜಿಲಾನ್ ಸಾಬ್ ಬಡಿಗೇರ.
