ಬಳ್ಳಾರಿ / ಕಂಪ್ಲಿ : ಎಮ್ಮಿಗನೂರ ಗ್ರಾಮದ ಶ್ರೀ ಜಡೆಸಿದ್ದೇಶ್ವರ ಎಜುಕೇಶನಲ್ ಟ್ರಸ್ಟ್ ವತಿಯಿಂದ ಗುರುವಾರ ವಿಶ್ವ ರಂಗಭೂಮಿ ದಿನವನ್ನು ಆಚರಿಸಲಾಯಿತು.
ಈ ವೇಳೆ ಟ್ರಸ್ಟ್ ಅಧ್ಯಕ್ಷ ಎಸ್ ರಾಮಪ್ಪ ಮಾತನಾಡಿ ವಿಶ್ವ ರಂಗಭೂಮಿ ದಿನ (WTD) ಮಾರ್ಚ್ 27 ರಂದು ಆಚರಿಸಲಾಗುವ ಅಂತರರಾಷ್ಟ್ರೀಯ ಆಚರಣೆಯಾಗಿದೆ, ಇದನ್ನು 1961 ರಲ್ಲಿ ಇಂಟರ್ನ್ಯಾಷನಲ್ ಥಿಯೇಟರ್ ಇನ್ಸ್ಟಿಟ್ಯೂಟ್ ಪ್ರಾರಂಭಿಸಿತು. ಪ್ಯಾರಿಸ್ ನ ಮುಖ್ಯ ಕಚೇರಿ ಹೊಂದಿರುವ ಅಂತರರಾಷ್ಟ್ರೀಯ ರಂಗಸಂಸ್ಥೆಯು ಪ್ರತಿವರ್ಷ ವಿಶ್ವದ ಯಾವುದಾದರೊಂದು ಭಾಷೆಯ ಹೆಸರಾಂತ ನಟ, ನಾಟಕಕಾರ, ನಿರ್ದೇಶಕ ಅಥವಾ ಸಂಘಟಕನಿಗೆ ಒಂದು ಸಂದೇಶ ಕೊಡುವಂತೆ ಕೇಳಿಕೊಂಡು ಅದನ್ನು ವಿಶ್ವದೆಲ್ಲೆಡೆ ಪಸರಿಸುತ್ತದೆ. ಕನ್ನಡಕ್ಕೂ ಒಮ್ಮೆ ಈ ಗೌರವ ಸಂದಿತ್ತು. ನಾಟಕಕಾರ ಗಿರೀಶ್ ಕಾರ್ನಾಡ್ ಅವರನ್ನು ‘ವಿಶ್ವರಂಗಭೂಮಿ ದಿನ’ದ ಸಂದೇಶ ನೀಡುವಂತೆ 2002ರಲ್ಲಿ ಕೇಳಿಕೊಳ್ಳಲಾಗಿತ್ತು. ಕಾರ್ನಾಡರು ಆಗ ಭಾರತೀಯ ಅಂತರರಾಷ್ಟ್ರೀಯ ಸಂಸ್ಥೆಯ ರಾಯಭಾರಿಯೂ ಆಗಿದ್ದರು. ಪ್ರಸ್ತುತ ದಿನಮಾನಗಳಲ್ಲಿ ಸಾಮಾಜಿಕ ಜಾಲತಾಣಗಳ ಪ್ರಭಾವದಿಂದ ರಂಗಭೂಮಿಯು ಮರೆಯಾಗುತ್ತಿದ್ದು ಪ್ರತಿಯೊಬ್ಬರು ರಂಗಭೂಮಿ ಮತ್ತು ರಂಗಭೂಮಿ ಕಲಾವಿದರಿಗೆ ಪ್ರೋತ್ಸಾಹ ನೀಡುವ ಮೂಲಕ ಉಳಿವಿಗೆ ಶ್ರಮಿಸಬೇಕು ರಂಗಭೂಮಿ ದೃಶ್ಯ ಅಭಿನಯ ಸಂಗೀತ ಸಂಭಾಷಣೆಗಳ ಮೂಲಕ ನೈಜ ಚಿತ್ರಣವನ್ನು ಜನರಿಗೆ ಮನಮುಟ್ಟುವಂತೆ ಪ್ರದರ್ಶಿಸುವ ಮಾಧ್ಯಮವಾಗಿದೆ ಎಂದರು.
ಪೂರ್ವದಲ್ಲಿ ರಂಗಭೂಮಿಗೆ ಕೊಡುಗೆ ನೀಡಿದ ಕಲಾವಿದರ ಭಾವಚಿತ್ರ ಪ್ರದರ್ಶಿಸಲಾಯಿತು
ಈ ಸಂದರ್ಭದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳು ಸೇರಿದಂತೆ ಮಕ್ಕಳು ಇತರರು ಇದ್ದರು.
ವರದಿ : ಜಿಲಾನ್ ಸಾಬ್ ಬಡಿಗೇರ.
