ಮ್ಯೆಸೂರು: ಬ್ಯಾಂಕರ್ಸ್ ಕನ್ನಡಿಗರ ಬಳಗವು ಮೈಸೂರು ಜಿಲ್ಲೆಯ ಗಂಧನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗ್ರಂಥಾಲಯಕ್ಕೆ ಕನ್ನಡ ಪುಸ್ತಕಗಳನ್ನು ಉಡುಗೊರೆಯಾಗಿ ನೀಡಿತು. ಬಳಗದ ವತಿಯಿಂದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಹಿರಿಯ ಪ್ರಬಂಧಕ ಶ್ರೀ ಧ್ರುವ ನಾಯಕ್ ರವರು ಶಾಲೆಯ ಮುಖ್ಯ ಉಪಾಧ್ಯಾಯರಾದ ಶ್ರೀ ಗೋವಿಂದರಾಜು ರವರಿಗೆ ಪುಸ್ತಕಗಳನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಬಳಗದ ಅಧ್ಯಕ್ಷ ಶ್ರೀ ವೆಂಕಟೇಶ ಶೇಷಾದ್ರಿ ಅವರು ಉಪಸ್ಥಿತರಿದ್ದರು.
ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ
