ಬಳ್ಳಾರಿ/ ಕಂಪ್ಲಿ : ನಗರದ ಕೋಟೆಯ ವಾರ್ಡ್ ನಂ.13 ಮತ್ತು 1 ರಲ್ಲಿ ಬರುವ ಬನ್ನಿಗಿಡ ಹತ್ತಿರ ನಾಲ್ಕು ರೋಡ್ ಹತ್ತಿರದ ಓಣಿಗಳಲ್ಲಿ ಕಳ್ಳಕಾಕರ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರು ಭಯ ಭೀತರಾಗಿದ್ದಾರೆ. ಕಳ್ಳರ ಹಾವಳಿ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಕಂಪ್ಲಿ ಪೊಲೀಸ್ ರಿಗೆ ಒತ್ತಾಯಿಸಿದ್ದಾರೆ. ನಿನ್ನೆ ತಡರಾತ್ರಿ ಬನ್ನಿಗಿಡದ ಹತ್ತಿರ ಕಳ್ಳರು ಬಂದಿದ್ದು ಸಾರ್ವಜನಿಕರು ಎಚ್ಚೆತ್ತುಕೊಳ್ಳುವ ಸ್ವಲ್ಪದರಲ್ಲೇ ತಪ್ಪಿಸಿಕೊಂಡಿದ್ದಾರೆ. ತಕ್ಷಣವೇ ಬೀಟ್ ಪೊಲೀಸ್ ರಗೆ ಸ್ಥಳೀಯ ನಿವಾಸಿಗಳು ಮಾಹಿತಿ ನೀಡಿದ್ದು ಅವರು ಬಂದು ಸ್ಥಳಗಳನ್ನು ಪರಿಶೀಲಿಸಿದಾಗ ಕಳ್ಳ ತಪ್ಪಿಸಿಕೊಂಡಿದ್ದಾನೆಂದು ತಿಳಿದು ಬಂದಿದೆ, ಹಾಗಾಗಿ ಕೋಟೆಯಲ್ಲಿ ಕಳ್ಳಕಾಕರ ಹಾವಳಿ ಹೆಚ್ಚಾಗಿದ್ದು ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ. ರಾತ್ರಿ ನಿದ್ದೆ ಮಾಡಲಾರದ ಪರಿಸ್ಥಿತಿ ಬಂದಿದೆ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ. ರಾತ್ರಿ ಪೊಲೀಸ್ ಬೀಟ್ ಹೆಚ್ಚಿಸಿ ಸಾರ್ವಜನಿಕರಿಗೆ ತಿಳಿವಳಿಕೆಯನ್ನು ನೀಡುವುದಲ್ಲದೆ ಪೊಲೀಸ್ ರಕ್ಷಣೆಯನ್ನು ಕೊಡಬೇಕೆಂದು ಸಾರ್ವಜನಿಕರು ಮನವಿ ಮಾಡಿಕೊಂಡಿದ್ದಾರೆ.
ವರದಿ : ಜಿಲಾನ್ ಸಾಬ್ ಬಡಿಗೇರ್.
