ಶ್ರೀ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳ ಹಾಗೂ ಶ್ರೀ ಶ್ರೀಮದ್ ಆನಂದಬೋಧೇಂದ್ರ ಸರಸ್ವತೀ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ಚಾಂದ್ರಮಾನ ಯುಗಾದಿಯ ಪ್ರಯುಕ್ತ ವಿಶ್ವಾವಸು ನಾಮ ಸಂವತ್ಸರದ ಪಂಚಾಗ ಶ್ರವಣ ಕಾರ್ಯಕ್ರಮವು ನೆರವೇರಿತು.
ಪುರೋಹಿತರು ಶ್ರೀ ಚಿನ್ಮಯ ಜೋಯಿಸರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಆಸ್ಥಾನ ವಿದ್ವಾಂಸರಾದ ಶ್ರೀ ಭಾಲಚಂದ್ರ ಶಾಸ್ತ್ರಿಗಳು, ಪ್ರಾಚಾರ್ಯರಾದ ಶ್ರೀ ಕೃಷ್ಣ ಜೋಯಿಸರು ಇದ್ದರು.
ಶ್ರೀ ದೇವರುಗಳಿಗೆ ಪೂಜೆ ಸಲ್ಲಿಸಿ ಪಾನಕ ನೈವೇದ್ಯವನ್ನು ಮಾಡಲಾಯಿತು ಎಂದು ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಪ್ರಕಟಣೆ ತಿಳಿಸಿದೆ.
ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ
