ಯಾದಗಿರಿ.ಶಹಾಪುರ: ಏಪ್ರೀಲ್ 1 ರಂದು ನಾರಾಯಣಪುರ ಎಡದಂಡೆ ಮತ್ತು ಬಲದಂಡೆ ಕಾಲುವೆಗೆ ಏ.1 ರಿಂದ 15 ರವರೆಗೆ ನೀರು ಹರಿಸುವಂತೆ ಆಗ್ರಹಿಸಿ ಸಮೀಪದ ಭೀಮರಾಯನ ಗುಡಿ ಕೆಬಿಜೆಎನ್‍ಎಲ್ ಕಚೇರಿ ಬಳಿ ಬೃಹತ್ ಪ್ರತಿಭಟನೆ ಹಾಗೂ ರಸ್ತೆ ತಡೆ ನಡೆಸಲಾಗುವುದು ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಹೋರಾಟ ಯಶಸ್ವಿಗೊಳಿಸಬೇಕೆಂದು ಬಿಜೆಪಿ ಮುಖಂಡ ಅಮೀನರಡ್ಡಿ ಯಾಳಗಿ ಕರೆ ನೀಡಿದ್ದಾರೆ.
ಪತ್ರಿಕೆ ಪ್ರಕಟಣೆ ಹೊರಡಿಸಿದ ಅವರು, ಏ.1 ಮಂಗಳವಾರ ಭೀಮರಾಯನ ಗುಡಿ ಕೆಬಿಜೆಎನ್‍ಎಲ್ ಕಚೇರಿಗೆ ಮುತ್ತಿಗೆ ಹಾಕಲಾಗುವುದಲ್ಲದೆ ಭೀಮರಾಯನ ಗುಡಿ ಬಳಿ ಬೀದರ ದಿಂದ ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿ ತಡೆ ನಡೆಸುವ ಮೂಲಕ ಸರ್ಕಾರದ ಗಮನ ಹರಿಸುವ ಕೆಲಸ ಮಾಡಲಾಗುತ್ತದೆ. ಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ಮಾಜಿ ಸಚಿವ ರಾಜೂಗೌಡ ನೇತೃತ್ವವಹಿಸಲಿದ್ದು, ಬಿಜೆಪಿ ಪಕ್ಷದ ಜಿಲ್ಲಾ ಮತ್ತು ಶಹಾಪುರ, ಸುರಪುರ ಭಾಗವದ ಪದಾಧಿಕಾರಿಗಳು ಕಾರ್ಯಕರ್ತರು ಮತ್ತು ವಿಶೇಷವಾಗಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟ ಯಶಸ್ವಿಗೊಳಿಸಬೇಕಾಗಿದೆ ಎಂದು ಅವರು ಮನವಿ ಮಾಡಿದ್ದಾರೆ.
ವರದಿ: ಚೇತನ ಹಿರೇಮಠ
