ಯಾದಗಿರಿ/ ಗುರಮಠಕಲ್: ತಾಲೂಕಿನ ಪುಟಪಾಕ್ ಗ್ರಾಮದಲ್ಲಿ ಮಾದಿಗ ಸಮಾಜದ ನರಸಪ್ಪ ತಂದೆ ರಾಮಪ್ಪ ಊರಡಿ ಅವರ ಮೇಲೆ ಅದೇ ಗ್ರಾಮದ ಮುಸ್ಲಿಂ ಸಮಾಜದ ಬಾಬಾ ಎನ್ನುವ ಯುವಕನೋರ್ವ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ನಿನ್ನೆ ಸಾಯಂಕಾಲ ನಡೆದಿದೆ.
ಈ ಕುರಿತು ಪತ್ರಿಕೆಯವರೊಂದಿಗೆ ಮಾಹಿತಿ ನೀಡಿದ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ಕೆ.ಬಿ. ವಾಸು ಮಾತನಾಡಿ,ಹಬ್ಬದ ಖುಷಿ ಕೇಳಿದ್ದಕ್ಕೆ ಈ ರೀತಿ ಪೆಟ್ರೋಲ್ ಹಾಕಿ ಬೆಂಕಿ ಹಚ್ಚುವದು ತಪ್ಪು, ದಾಳಿಯ ಪರಿಣಾಮವಾಗಿ ನರಸಪ್ಪ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರು ಜೀವನ ಮರಣದ ಹೋರಾಟ ನಡೆಸುತ್ತಿದ್ದಾರೆ ಎಂದರು.
ಆರೋಪಿಯನ್ನು ತಕ್ಷಣವೇ ಬಂಧಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಒತ್ತಾಯಿಸಿಲಾಗಿದೆ, ಈ ಘಟನೆಯು ಗ್ರಾಮದಲ್ಲಿ ಆತಂಕ ಸೃಷ್ಟಿಸಿದ್ದು, ಸ್ಥಳೀಯರು ಆರೋಪಿಯ ಬಂಧನ ಹಾಗೂ ಈ ಪ್ರಕರಣಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸುತ್ತಿದ್ದಾರೆ ಎಂದರು.
ಗ್ರಾಮಸ್ಥರ ಸಮಯ ಪ್ರಜ್ಞೆಯಿಂದಾಗಿ ಕೂಡಲೇ ಗಾಯಾಳನ್ನು ನೆರೆಯ ತೆಲಂಗಾಣದ ನಾರಾಯಣಪೇಟೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂದರ್ಭದಲ್ಲಿ ಮಾದಿಗ ಸಮಾಜದ ಮುಖಂಡರಾದ ವೆಂಕಟೇಶ್ ಪುಟಪಾಕ್ ಉಪಸ್ಥಿತರಿದ್ದರು.
ವರದಿ: ಜಗದೀಶ್ ಕುಮಾರ್
