ಬೀದರ್/ ಬಸವಕಲ್ಯಾಣ: ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆಗಾಗಿ ನೀಡಲಾಗುವ ಮುಖ್ಯಮಂತ್ರಿಗಳ ಪದಕಕ್ಕೆ ತಾಲೂಕಿನ ಮುಡಬಿ ಪೊಲೀಸ್ ಠಾಣೆಯ ಪಿಎಸ್‌ಐ ಜಯಶ್ರೀ ಹೊಡಲ್ ಅವರು ಭಾಜನರಾಗಿದ್ದಾರೆ.
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಹೊಡಲ್ ಗ್ರಾಮದವರಾದ ಇವರು 2016ರ ಬ್ಯಾಚ್‌ನ ಪಿಎಸ್‌ಐ ಆಗಿ ನೇಮಕಗೊಂಡಿದ್ದು, ಈ ಹಿಂದೆ ಯಾದಗಿರಿ ಜಿಲ್ಲೆಯ ವಡಗೇರಾ ಪೊಲೀಸ್ ಠಾಣೆಯಲ್ಲಿ ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಮುಖ್ಯಮಂತ್ರಿಗಳ ಪದಕಕ್ಕೆ ಆಯ್ಕೆಯಾಗಿದ್ದಾರೆ. ಈ ಹಿಂದೆ 2018 ರಿಂದ 2021ರವರೆಗೆ ಬಸವಕಲ್ಯಾಣ ಸಂಚಾರಿ ಠಾಣೆ ಹಾಗೂ ಮಂಠಾಳ ಠಾಣೆಯಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸಿದ್ದು ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ನೆಲೆಸಲು ಹಾಗೂ ಅಪರಾಧ ಚಟುವಟಿಕೆಗಳ ನಿಯಂತ್ರಣಕ್ಕಾಗಿ ಕಠಿಣ ಕ್ರಮ ಕೈಗೊಂಡು ಜನ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ವರದಿ: ಶ್ರೀನಿವಾಸ ಬಿರಾದಾರ
