ಬೆಂಗಳೂರು : ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಕೆ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧವಿದೆ ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ ಇದನ್ನ ನಿರ್ವಹಿಸಬೇಕಾದರೆ ಕಾನೂನು ವ್ಯವಸ್ಥೆ ಶಾಂತಿ ಪಾಲನೆ ಉತ್ತಮವಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಇಂದು ಅವರು ಬೆಂಗಳೂರಿನ ಕೋರಮಂಗಲ ಪೊಲೀಸ್ ಕವಾಯತ್ತು ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ ಪದಕ ಪುರಸ್ಕೃತರಿಗೆ ಪದಕಗಳನ್ನು ಪ್ರಧಾನ ಮಾಡಿ ಮಾತನಾಡಿದರು. ಮೂರು ವರ್ಷಗಳಿಂದ ಬಾಕಿ ಉಳಿದಿದ್ದ ಮುಖ್ಯಮಂತ್ರಿಗಳ ಪದಕವನ್ನು ಈ ಬಾರಿ ಒಟ್ಟಾಗಿ ವಿತರಿಸಿದ್ದೇವೆ. ಎಲ್ಲಾ ಪದಕ ಪುರಸ್ಕೃತರಿಗೂ ಅಭಿನಂದನೆಗಳು, ತಂತ್ರಜ್ಞಾನದ ಬೆಳವಣಿಗೆಯಿಂದ ಸೈಬರ್ ಅಪರಾಧಗಳು ವ್ಯಾಪಕವಾಗಿ ಹೆಚ್ಚುತ್ತಿವೆ ಅದೇ ತಂತ್ರಜ್ಞಾನದ ಸಾಧ್ಯತೆಗಳನ್ನ ಬಳಸಿಕೊಂಡು ಸೈಬರ್ ಅಪರಾಧಗಳನ್ನು ನಿಗ್ರಹಿಸಬೇಕು ಎಂದರು. ಇದೇ ಸಂದರ್ಭದಲ್ಲಿ ಕಂಪ್ಲಿ ಸಿಪಿಐ ಕೆ.ಬಿ. ವಾಸುಕುಮಾರ್ ರವರಿಗೆ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದವರಿಗೆ ಗುರುತಿಸಿ ನೀಡಲಾಗುವ ಮುಖ್ಯಮಂತ್ರಿಗಳ ಪದಕವನ್ನು ಕರ್ನಾಟಕದ ಪ್ರತಿಭಾವಂತ ಪೊಲೀಸ್ ಅಧಿಕಾರಿ ಕೆ. ಬಿ. ವಾಸು ಕುಮಾರ್ (ಕಂಪ್ಲಿ ಪೊಲೀಸ್ ವೃತ್ತ ನಿರೀಕ್ಷಕ) ಅವರಿಗೆ 2022-23ನೇ ಸಾಲಿನ ಮುಖ್ಯಮಂತ್ರಿಗಳ ಪೊಲೀಸ್ ಪದಕ ನೀಡಿ ಗೌರವಿಸಿದರು. ಈ ಪ್ರಶಸ್ತಿ ಅವರ ದಕ್ಷ ನಿರ್ವಹಣೆ ಅಪರಾಧ ಚಟುವಟಿಕೆ ನಿಯಂತ್ರಣ, ಕಳ್ಳತನ ಪ್ರಕರಣ ಪತ್ತೆ ಕಾರ್ಯ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ನೀಡಿದ ಅಮೂಲ್ಯ ಸೇವೆ ಹಾಗೂ ಸಮುದಾಯ ಸ್ನೇಹಪೂರ್ಣ ಕಾರ್ಯ ಮತ್ತು ಮಹತ್ವದ ಪ್ರಕರಣಗಳನ್ನು ಯಶಸ್ವಿಯಾಗಿ ಬಗೆಹರಿಸಿದ ಪ್ರತಿಫಲವಾಗಿ ನೀಡಲಾಗಿದೆ.
ಇವರು ಇತ್ತೀಚೆಗೆ ಪೊಲೀಸ್ ಇಲಾಖೆಯ ಅಪರೂಪದ ಕೊಡುಗೆಗಾಗಿ ಗುರುತಿಸಿಕೊಂಡಿದ್ದರು. 2022-23ರಲ್ಲಿ, ಕಾನೂನು ಮತ್ತು ಸುವ್ಯವಸ್ಥೆ ಕಾಯ್ದುಕೊಳ್ಳುವಲ್ಲಿ ವಿಶೇಷ ಸೇವೆ ಸಲ್ಲಿಸಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿಗಳ ಪದಕವನ್ನು ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಗೃಹ ಸಚಿವರಾದ ಜಿ ಪರಮೇಶ್ವರ್, ಗೃಹ ಇಲಾಖೆಯ ಅ.ಪ.ರ ಮುಖ್ಯ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸಿರ್ ಅಹಮದ್, ಮುಖ್ಯಮಂತ್ರಿಗಳ ಅಪಾರ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತಿಕ ಅವರು ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕಂಪ್ಲಿಯ ಗಣ್ಯರು, ಸಾರ್ವಜನಿಕರು ಹಾಗೂ ನಮ್ಮ ಕರುನಾಡ ಕಂದ ಪತ್ರಿಕೆ ಅವರನ್ನು ಅಭಿನಂದಿಸಿದೆ.
ವರದಿ : ಜಿಲಾನ್ ಸಾಬ್ ಬಡಿಗೇರ.
