ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ತಾಲೂಕ ಪಂಚಾಯತ್ ನವೀಕೃತ ಕಟ್ಟಡಕ್ಕೆ ಶಾಸಕ ಶರಣಗೌಡ ಕಂದಕೂರು ಚಾಲನೆ

ಯಾದಗಿರಿ/ ಗುರುಮಠಕಲ್ : ತಾಲೂಕಿನಲ್ಲಿ ಸರಿಯಾಗಿ ಇಲಾಖೆಗಳು ಇಲ್ಲದೆ ದೂರದ ಯಾದಗಿರಿಗೆ ಜನರು ಅಲೆದಾಡಬೇಕಾಗಿತ್ತು, ಈಗ ಗುರುಮಠಕಲ್ ತಾಲೂಕು ಆಗಿರುವುದರಿಂದ ಹಂತ ಹಂತವಾಗಿ ಇಲಾಖೆಗಳು ನಿರ್ಮಾಣಗೊಳ್ಳುತ್ತಿದ್ದು ಅಧಿಕಾರಿಗಳಿಗೆ ಹಾಗೂ ಜನರಿಗೆ ಪ್ರಯೋಜನೆ ಆಗಲಿದೆ.
ಮುಂದಿನ ದಿನಗಳಲ್ಲಿ ತಾಲೂಕು ಸಂಕೀರ್ಣ ಕಟ್ಟಡ ನಿರ್ಮಾಣವಾದಾಗ ಎಲ್ಲಾ ಇಲಾಖೆಗಳು ಒಂದೇ ಸೂರಿನಡಿ ಬರಲಿದ್ದು, ಆಗ ಜನರಿಗೆ ಪ್ರಯೋಜನವಾಗಲಿದೆ ಎಂದರು.
ಈ ಹಿಂದಿನ ತಾಪಂ ಕಟ್ಟಡದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕೆಲಸ ಮಾಡುವುದು ಕಷ್ಟಕರವಾಗಿತ್ತು. ಇದನ್ನು ಪರಿಗಣಿಸಿ, ಈ ಕಟ್ಟಡ ಆಯ್ಕೆ ಮಾಡಿಕೊಂಡು ಇಲ್ಲಿ ತಾಪಂ ಕಚೇರಿ ಪ್ರಾರಂಭಿಸಲಾಗಿದೆ. ಇನ್ಮುಂದೆ ಅಧಿಕಾರಿಗಳು ಸುಗಮವಾಗಿ ಕರ್ತವ್ಯ ನಿರ್ವಹಿಸಿ ಜನಪರ ಕೆಲಸ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಲವೀಶ್ ಓರಾಡಿಯಾ, ಯೋಜನಾ ನಿರ್ದೇಶಕರಾದ ಸಿ.ಬಿ.ದೇವರಮನಿ, ಸಹಾಯಕ ಯೋಜನಾಧಿಕಾರಿ ಸಂತೋಷ ಕುಮಾರ, ಗುರುಮಠಕಲ್ ಇಒ ಅಮರೇಶ ಪಾಟೀಲ, ಯಾದಗಿರಿ ಇಒ ಮಹಾದೇವಪ್ಪ ಶಹಾಪೂರ ಇಒ ಬಸವರಾಜ ಶರಬೈ ಪ್ರಮುಖರಾದ ಜಿ.ತಮ್ಮಣ್ಣ ಪ್ರಕಾಶ ನಿರೇಟಿ, ನವಾಜರಡ್ಡಿ ಪಾಟೀಲ, ಶರಣು ಆವಂಟಿ, ಮಲ್ಲಿಕಾರ್ಜುನ ಅರುಣಿ, ಬಾಲಪ್ಪ ದಾಸರಿ, ಆಶಣ್ಣ ಬುದ್ದಾ ಸೇರಿದಂತೆ ಇತರರಿದ್ದರು.

ಪಿಡಿಒಗಳು ಕೇಂದ್ರ ಸ್ಥಾನದಲ್ಲಿದ್ದು ಕರ್ತವ್ಯ ನಿರ್ವಹಿಸಲು ಶಾಸಕರಿಂದ ಸೂಚನೆ.

ಗುರುಮಠಕಲ್ ತಾಲೂಕಿನಲ್ಲಿ ಜನರಿಗೆ ಶುದ್ಧ ಕುಡಿಯುವ ನೀರಿನ ತೊಂದರೆಯಾಗದಂತೆ ಕ್ರಮಕೈಗೊಳ್ಳಬೇಕು, ಎಲ್ಲಾ ಪಿಡಿಒಗಳು ಕೇಂದ್ರ ಸ್ಥಾನದಲ್ಲಿದ್ದು ಕರ್ತವ್ಯ ನಿರ್ವಹಿಸಬೇಕು ಎಂದು ಶಾಸಕ ಶರಣಗೌಡ ಕಂದಕೂರ ಗ್ರಾಪಂ ಪಿಡಿಒಗಳಿಗೆ ತಾಕೀತು ಮಾಡಿದರು.

ಗುರುಮಠಕಲ್ ಪಟ್ಟಣದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು, ತಾಪಂ ಕಾರ್ಯ ನಿರ್ವಹಣಾಧಿಕಾರಿಗಳು, ಪಿಡಿಒಗಳ ಸಭೆಯಲ್ಲಿ ಮಾತನಾಡಿದರು.
ಮುಂದಿನ ದಿನಗಳಲ್ಲಿ ಬೇಸಿಗೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜನರಿಗೆ ಕುಡಿಯುವ ನೀರಿನ ತೊಂದರೆಯಾಗಲಿದೆ, ಈ ಹಿಂದೆ ಬೇಸಿಗೆಯಲ್ಲಿ ಹಲವು ಹಳ್ಳಿಗಳ ಜನರು ನೀರಿನ ತೊಂದರೆಯಿಂದ ಸಾಕಷ್ಟು ಸಂಕಷ್ಟ ಅನುಭವಿಸಿದ್ದಾರೆ, ಇದನ್ನು ಗಮನದಲ್ಲಿಟ್ಟುಕೊಂಡು ಜಲಮೂಲಗಳ ಪತ್ತೆಯ ಜೊತೆಗೆ ಸಾದ್ಯವಾದಷ್ಟು ಜಾಗೃತರಾಗಿ ಕೆಲಸ ಮಾಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಲವೀಶ್‌ ಓರಾಡಿಯಾ, ಯೋಜನಾ ನಿರ್ದೇಶಕರಾದ ಸಿ.ಡಿ.ದೇವರಮನಿ, ಸಹಾಯಕ ಯೋಜನಾಧಿಕಾರಿ ಸಂತೋಷ ಕುಮಾರ, ಗುರುಮಠಕಲ್ ಇಒ ಅಮರೇಶ ಪಾಟೀಲ ಇದ್ದರು.

ವರದಿ: ಜಗದೀಶ್ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ