ಬಳ್ಳಾರಿ :ಸರ್ಕಾರಿ ಆದೇಶದಂತೆ 2025 ನೇ ಸಾಲಿನ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನ ಹಿನ್ನೆಲೆಯಲ್ಲಿ ಬೆಳಗಾವಿ ಭಾಗದ ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಕಲ್ಬುರ್ಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಪ್ರಸ್ತುತ ಜಾರಿಯಲ್ಲಿರುವ ಸರ್ಕಾರಿ ಕಚೇರಿಗಳ ವೇಳಾಪಟ್ಟಿಯಲ್ಲಿಯ ಬದಲಾಗಿ 2025 ನೇ ಸಾಲಿನ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 1:30 ಗಂಟೆಯವರೆಗೆ ಬದಲಾಯಿಸಿ ಆದೇಶಿಸುತ್ತಾರೆ.
ಮುಂದುವರೆದು ಈ ಜಿಲ್ಲೆಗಳಲ್ಲಿನ ಸರ್ಕಾರಿ ನೌಕರರು ಮೊದಲಾದ ಸಮಯದಲ್ಲಿ ತಮ್ಮ ಕರ್ತವ್ಯವನ್ನು ಇಂದಿನಂತೆ ಯಾವುದೇ ಲೋಪತಡೆ ಇಲ್ಲದೆ ಕರ್ತವ್ಯ ನಿರ್ವಹಿಸತಕ್ಕದ್ದು, ಸಾರ್ವಜನಿಕರಿಗೆ ಯಾವುದೇ ರೀತಿಯ ಅನಾನುಕೂಲ ಆಗದಂತೆ ಮತ್ತು ಜಿಲ್ಲಾಧಿಕಾರಿಗಳ ತುರ್ತು ಸಂದರ್ಭದಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲೂ ನಿರ್ದೇಶಿಸಿದರೆ ಸಮಯದ ಪರಿಮಿತಿ ಇಲ್ಲದೆ ಕರ್ತವ್ಯ ನಿರ್ವಹಿಸುವಂತೆ ಬಳ್ಳಾರಿ ಜಿಲ್ಲಾಧಿಕಾರಿಗಳು ಸೂಚಿಸಿರುತ್ತಾರೆ.
ವರದಿ : ಜಿಲಾನ್ ಸಾಬ್ ಬಡಿಗೇರ.
