ಕೊಪ್ಪಳ/ ಗಂಗಾವತಿ : ತಾಲೂಕಿನ ಜಂಗಮರ ಕಲ್ಗುಡಿ ಗ್ರಾಮದ ಶಿಕ್ಷಕಿ ಎಂದಿನಂತೆ ಶಾಲೆಗೆ ಹೋಗಲು ಹೊರಟಿದ್ದ ವೇಳೆ ರಾತ್ರಿ ಇಡೀ ಸುರಿದ ಮಳೆಯಿಂದಾಗಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಆಕಸ್ಮಿಕವಾಗಿ ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ ಶಿಕ್ಷಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಜಂಗಮರ ಕಲ್ಗುಡಿಯಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.
ಮೃತ ಶಿಕ್ಷಕಿ ಜಂಗಮರ ಕಲ್ಗುಡಿ ಗ್ರಾಮದ ಹರಿತಾ ಶ್ರೀನಿವಾಸ (26) ಎಂದು ಗುರುತಿಸಲಾಗಿದೆ. ಅವರು ವಿದ್ಯಾನಗರದಲ್ಲಿರುವ ಶ್ರೀ ಗೊಟ್ಟಿಪಾಟಿ ವೆಂಕಟರತ್ನಂ ಮೆಮೋರಿಯಲ್ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ದಿನ ನಿತ್ಯ ಶಾಲೆಯ ವಾಹನವು ವಿದ್ಯಾರ್ಥಿಗಳನ್ನು ಮತ್ತು ಶಿಕ್ಷಕರನ್ನು ಕರೆದೊಯ್ಯಲು ಬರುತ್ತಿತ್ತು, ಮನೆಯಿಂದ ಹೋಗಲು ಮಾವ ಪೂರ್ಣಚಂದ್ರರಾವ್ ರೊಂದಿಗೆ ಸ್ಕೂಟಿಯಲ್ಲಿ ಹೊರಟಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ಕಟ್ಟಾಗಿ ಶಿಕ್ಷಕಿ ಮೇಲೆ ಬಿದ್ದಿದೆ, ಮಾವ ಒಂದಡೆ ಬಿದ್ದಿದ್ದರೆ ಸೊಸೆ ಒಂದಡೆ ಬಿದ್ದಿದ್ದಾರೆ, ವಿದ್ಯುತ್ ತಂತಿಯು ಸಂಪೂರ್ಣವಾಗಿ ಶಿಕ್ಷಕಿಯ ಮೇಲೆ ಬಿದ್ದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತಳಿಗೆ ಒಂದು ಗಂಡು ಮಗು ಮತ್ತು ಹೆಣ್ಣು ಅವಳಿ ಮಕ್ಕಳಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಜಂಗಮರ ಕಲ್ಗುಡಿಯ ಪ್ರತಿಯೊಂದು ಬೀದಿಯಲ್ಲಿ ಸುಮಾರು ಮೂವತ್ತು ವರ್ಷಗಳ ಹಿಂದೆ ಅಳವಡಿಸಿದ ವಿದ್ಯುತ್ ಕಂಬದ ತಂತಿಗಳಿದ್ದು ತೆರವು ಗೊಳಿಸಲು ಹಲವು ಬಾರಿ ಮನವಿ ಸಲ್ಲಿಸಿದರೂ ಅಧಿಕಾರಿಗಳು ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ ಆಡುತ್ತಿದ್ದಾರೆ ಶೀಘ್ರದಲ್ಲೇ ಶೀತಲಗೊಂಡ ಹಳೆಯ ವಿದ್ಯುತ್ ತಂತಿಗಳನ್ನು ಮತ್ತು ಕಂಬಗಳನ್ನು ಸ್ಥಳಾಂತರ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ವರದಿ : ಜಿಲಾನಸಾಬ್ ಬಡಿಗೇರ್.
