ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಐಸಿಸಿ ನೀರಾವರಿ ಸಲಹಾ ಸಮಿತಿ ತೀರ್ಮಾನದಂತೆ ಏಪ್ರಿಲ್ 10ರ ವರೆಗೆ ನೀರು ಕೊಡಿ ಇಲ್ಲವಾದರೆ ಪ್ರತಿ ಎಕರೆಗೆ 50 ಸಾವಿರ ರೂಪಾಯಿ ಪರಿಹಾರ ಕೊಡಿ : ಜಿಲ್ಲಾಧ್ಯಕ್ಷ ಬಿ. ವಿ. ಗೌಡ

ಬಳ್ಳಾರಿ / ಕಂಪ್ಲಿ : ಏಪ್ರಿಲ್ ಕೊನೆತನಕ ಎಲ್‌ಎಲ್‌ಸಿ ಕಾಲುವೆಗೆ ನೀರು ಹರಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಬಿ.ವಿ. ಗೌಡ ಆಗ್ರಹಿಸಿದರು.
ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯನ್ನು ಆಯೋಜಿಸಿ ಮಾತನಾಡಿ, ಐಸಿಸಿ ನೀರಾವರಿ ಸಲಹಾ ಸಮಿತಿ ತುರ್ತಾಗಿ ನಡೆದ ಬೆಂಗಳೂರಿನ ವಿಧಾನಸೌಧದಲ್ಲಿ ಐಸಿಸಿ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು ಕೊಪ್ಪಳ ರಾಯಚೂರು ವಿಜಯನಗರ ಬಳ್ಳಾರಿ ಜಿಲ್ಲೆಯ ಜಿಲ್ಲಾಧಿಕಾರಿಗಳು, ಉಸ್ತುವಾರಿ ಸಚಿವರು, ಶಾಸಕರಗಳ ಹಾಗೂ ಎಲ್ಲಾ ರೈತ ಮುಖಂಡರ ಸಭೆಯನ್ನು ಮಾಡಲಾಗಿದ್ದು, ಸಭೆಯ ತೀರ್ಮಾನದಂತೆ ಏಪ್ರಿಲ್ 10ನೇ ತಾರೀಖಿನ ತನಕ ಪ್ರತಿದಿನ 450 ಕೂಸೆಕ್ಸ್ ನಂತೆ ತುಂಗಭದ್ರಾ ಬಲದಂಡೆ ಕೆಳಭಾಗದ ಕಾಲುವೆಗಳಿಗೆ ನೀರು ಹರಿಸಲು ಎಲ್ಲರೂ ಒಪ್ಪಿಕೊಂಡು ತೀರ್ಮಾನಿಸಿದ್ದರು. ಆದರೆ ಪ್ರಾದೇಶಿಕ ಆಯುಕ್ತರ ಆದೇಶದಂತೆ ಕೇವಲ ಏಪ್ರಿಲ್ 5ನೇ ತಾರೀಖಿನವರೆಗೆ ಮಾತ್ರ ನೀರು ಹರಿಸಲು ಆದೇಶಿಸಲಾಗಿದೆ. ಏಪ್ರಿಲ್ 10ನೇ ತಾರೀಕಿನವರೆ ನೀರು ಕೊಡದಿದ್ದ ಪಕ್ಷದಲ್ಲಿ ರೈತರ ಬೆಳೆಗಳು 25 ರಿಂದ 30 ರಷ್ಟು ನಷ್ಟವಾಗಲಿದೆ. ಪ್ರಾದೇಶಿಕ ಆಯುಕ್ತರು ಕಲಬುರ್ಗಿ ಹಾಗೂ ಐಸಿಸಿ ಸಲಹಾ ಸಮಿತಿಯ ಅಧ್ಯಕ್ಷರ ಆದೇಶಗಳು ಭಿನ್ನವಾಗಿದ್ದು, ಎರಡು ಆದೇಶಗಳು ರೈತರಿಗೆ ಗೊಂದಲ ಉಂಟಾಗಿದ್ದು, ಇದರ ಬಗ್ಗೆ ಸ್ಥಳೀಯ ಶಾಸಕರಾದ ಮಾನ್ಯ ಜೆ. ಎನ್. ಗಣೇಶ ಅವರ ಬಳಿ ರೈತರ ನಿಯೋಗ ಭೇಟಿಯಾದಾಗ ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಮಾತನಾಡಿ ಏಪ್ರಿಲ್ 5ರ ನಂತರವೂ ನೀರು ಹರಿಸುವ ಭರವಸೆಯನ್ನು ನೀಡಿದ್ದಾರೆ. ಐಸಿಸಿ ನೀರಾವರಿ ಸಲಹಾ ಸಮಿತಿ ತೀರ್ಮಾನದಂತೆ ತುಂಗಭದ್ರಾ ಬಲದಂಡೆ ಕೆಳಮಟ್ಟದ ಕಾಲುವೆಗಳಿಗೆ ಏಪ್ರಿಲ್ 10ರ ವೆರೆಗೆ ನೀರನ್ನು ಹರಿಸಬೇಕು, ಇಲ್ಲವಾದರೆ ಪ್ರತಿ ಎಕರೆಗೆ 50 ಸಾವಿರ ರೂಪಾಯಿ ಪರಿಹಾರ ನೀಡಬೇಕೆಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಆನಂದ ರೆಡ್ಡಿ, ತಾಲೂಕು ಅಧ್ಯಕ್ಷ ವಿರೇಶ, ತಾಲೂಕು ಕಾರ್ಯಧ್ಯಕ್ಷರಾದ ಕೊಟ್ಟೂರ್ ರಮೇಶ, ಡಿ ಮುರಾರಿ, ನಗರ ಘಟಕ ಅಧ್ಯಕ್ಷ ತಿಮ್ಮಪ್ಪ, ತಾಲೂಕು ಗೌರವಾಧ್ಯಕ್ಷ ಆದೋನಿ ರಂಗಪ್ಪ, ತಾಲೂಕು ಉಪಾಧ್ಯಕ್ಷ ಕಾಗೆ ಈರಣ್ಣ, ಮುಖಂಡರಾದ ಟಿ. ಗಂಗಣ್ಣ, ತೌಸೀಫ್, ಅಕ್ಬರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ