ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಪ್ರಾಪ್ತ ಮಗನಿಗೆ ಬೈಕ್ ಚಾಲನೆಗೆ ಅವಕಾಶಕೊಟ್ಟ ತಂದೆಗೆ ಬಿತ್ತು 25 ಸಾವಿರ ದಂಡ

ಕೊಪ್ಪಳ/ ಗಂಗಾವತಿ : ಪೋಷಕರು ಅಪ್ರಾಪ್ತ ಮಕ್ಕಳಿಗೆ ಬೈಕ್ ನೀಡುವ ಮುನ್ನ ಎಚ್ಚರ ವಹಿಸಬೇಕು. ಅಪ್ರಾಪ್ತ ಮಗನಿಗೆ ಬೈಕ್ ಚಾಲನೆ ಮಾಡಲು ಕೊಟ್ಟ ತಂದೆಗೆ ಕೋರ್ಟ್ 25 ಸಾವಿರ ರೂ. ದಂಡ ವಿಧಿಸಿದೆ.

ಗಂಗಾವತಿ ನಗರ ಸಂಚಾರಿ ಠಾಣೆಯ ಪಿ.ಎಸ್‌.ಐ ಶಾರದಮ್ಮ ಅವರು ಮಾ-23 ರಂದು ಬೆಳಿಗ್ಗೆ 11 ಘಂಟೆಯ ಸುಮಾರಿಗೆ ಪಂಪಾನಗರದ ಬಳಿ ವಾಹನಗಳ ತಪಾಸಣೆ ನಡೆಸುವಾಗ ಅಪ್ರಾಪ್ತನು ಬೈಕ್​ ಚಲಾಯಿಸುತ್ತಿರುವುದು ಬೆಳಕಿಗೆ ಬಂದಿತ್ತು. ತಪಾಸಣೆ ವೇಳೆ ದ್ವಿಚಕ್ರ ವಾಹನವನ್ನು ಬಾಲಕ ಚಲಾಯಿಸಿಕೊಂಡು ಬಂದಿದ್ದ. ಅಪ್ರಾಪ್ತ ವಾಹನ ಚಾಲನೆ ಮಾಡಲು ಕಾನೂನಿನಲ್ಲಿ ಅವಕಾಶ ಇಲ್ಲ. ಅಲ್ಲದೇ ಅಪ್ರಾಪ್ತರಿಗೆ ವಾಹನ ಚಾಲನೆಗೆ ಕೊಡುವುದು ಕೂಡಾ ಅಪರಾಧವಾಗಿದೆ.
ಈ ಬಗ್ಗೆ ಗಂಗಾವತಿ ಸಂಚಾರಿ ಪೊಲೀಸರು ವಾಹನದ‌ ಮಾಲೀಕರ ವಿರುದ್ಧ ಲಘು ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಈ ಕುರಿತು ಸಿಜೆ ಮತ್ತು ಜೆಎಂಎಫ್​ಸಿ ನ್ಯಾಯಾಲಯದ ನ್ಯಾಯಾಧೀಶರು ಏ-3 ರಂದು ದಂಡ ವಿಧಿಸಿ ಆದೇಶಿಸಿದ್ದಾರೆ. ದ್ವಿಚಕ್ರ ವಾಹನ ಮಾಲೀಕರಾದ ಬಾಲಕನ ತಂದೆಗೆ 25 ಸಾವಿರ ರೂ. ದಂಡ ವಿಧಿಸಲಾಗಿದೆ. ಈ ಮೂಲಕ ನ್ಯಾಯಾಲಯವು ಅಪ್ರಾಪ್ತರಿಗೆ ವಾಹನ ನೀಡದಂತೆ ಪೋಷಕರಿಗೆ ಎಚ್ಚರಿಕೆ ನೀಡಿದೆ.

ವರದಿ : ಜಿಲಾನ್ ಸಾಬ್ ಬಡಿಗೇರ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!