ಶಿವಮೊಗ್ಗ: ಶಿಕಾರಿಪುರ/ ಪುರಸಭೆಯ ಅಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಶ್ರೀಮತಿ ಸುನಂದಾ ಮಂಜುನಾಥ್ ಅವರನ್ನು ಅಭಿನಂದಿಸಲಾಯಿತು. ಶಿಕಾರಿಪುರ ವಿಧಾನಸಭಾ ಕ್ಷೇತ್ರ ಎಂದಿನಿಂದಲೂ ನಮ್ಮ ಪಕ್ಷದ ಆಡಳಿತದಲ್ಲಿ, ಅಭಿವೃದ್ಧಿಯಲ್ಲಿ ಮಾದರಿ ಸುಧಾರಣೆಯನ್ನು ಕಂಡಿದ್ದು ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ನೇತೃತ್ವದಲ್ಲಿ ಅಭಿವೃದ್ಧಿ ಕಾರ್ಯಗಳು ಇನ್ನಷ್ಟು ವಿಸ್ತರಿಸಲಿ ಎಂದು ಹಾರೈಸುತ್ತೇನೆ.
ಶಿಕಾರಿಪುರ ಪಟ್ಟಣದ ಮೂಲಭೂತ ಸೌಕರ್ಯಗಳೂ ಸೇರಿದಂತೆ ಜನಪರ ಆಡಳಿತ ನೀಡಲು ಪುರಸಭೆಯ ಕಾರ್ಯನಿರ್ವಹಣೆಗೆ ನಮ್ಮ ಸಂಪೂರ್ಣ ಸಹಕಾರ ನಿರಂತರವಾಗಿ ಮುಂದುವರೆಯಲಿದೆ.
ಈ ಸಂದರ್ಭದಲ್ಲಿ ತಾಲ್ಲೂಕು ಅಧ್ಯಕ್ಷರಾದ ಶ್ರೀ ಹನುಮಂತಪ್ಪನವರು, ಮುಖಂಡರಾದ ಶ್ರೀ ಕೆ.ಎಸ್.ಗುರುಮೂರ್ತಿ, ನಿಕಟಪೂರ್ವ ಪುರಸಭಾ ಅಧ್ಯಕ್ಷರಾದ ಶ್ರೀಮತಿ ಶೈಲಾ ಯೋಗೀಶ್ ಮಡ್ಡಿ, ಉಪಾಧ್ಯಕ್ಷರಾದ ಶ್ರೀಮತಿ ರೂಪಾ ಮಂಜುನಾಥ್ ಅವರುಗಳು ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಕಾರ್ಯಕರ್ತರು ಹಾಗೂ ಸಾರ್ವಜನಿಕ ಬಂಧುಗಳು ಉಪಸ್ಥಿತರಿದ್ದರು.
ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ
