ವಿಜಯನಗರ / ಹೊಸಪೇಟೆ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ (ಕೆ.ಎಸ್.ಆರ್.ಟಿ.ಸಿ.) ಹೊಸಪೇಟೆ ವಿಭಾಗದಿಂದ ಸಮರ್ಪಕ ಬಸ್ ಸಂಚಾರ ಕುರಿತು ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಪ್ರಯಾಣಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರಿಗೆ ಬಸ್ ಗಳ ಸಂಚಾರದಲ್ಲಿ ಉಂಟಾಗುತ್ತಿರುವ ಕುಂದು ಕೊರತೆ ಹಾಗೂ ಸಮಸ್ಯೆಗಳ ಕುರಿತು ಏಪ್ರಿಲ್ 7 ರಂದು ಮಧ್ಯಾಹ್ನ 3: 30ರಿಂದ ಸಂಜೆ 4:30ರ ವರೆಗೆ ದೂರವಾಣಿ ಸಂಖ್ಯೆಗಳಾದ 77609 92314 , 7760992317 ಗೆ ಕರೆ ಮಾಡಿ ಸಮಸ್ಯೆಗಳನ್ನು ತಿಳಿಸಬಹುದು.
ಈ ಸಮಸ್ಯೆಗಳಿಗೆ ಸ್ಪಂದಿಸಿ ಸೂಕ್ತ ಪರಿಹಾರ ದೊರಕಿಸಿ ಕೊಡುವುದಾಗಿ ಹೊಸಪೇಟೆ ವಿಭಾಗದ ನಿಯಂತ್ರಣಧಿಕಾರಿ ತಿಮ್ಮಾರೆಡ್ಡಿ ಹೀರಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ : ಜಿಲಾನ್ ಸಾಬ್ ಬಡಿಗೇರ.
