ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ತಾಲೂಕ ಕಛೇರಿಯ ಮಹಾತ್ಮಾ ಗಾಂಧೀಜಿ ಸಭಾಂಗಣದಲ್ಲಿ ಭಾರತದ ಮಾಜಿ ಉಪಪ್ರಧಾನಿಗಳು, ಹಸಿರು ಕ್ರಾಂತಿಯ ಹರಿಕಾರರು ಆಗಿರುವ ಡಾ|| ಬಾಬು ಜಗಜೀವನರಾಂ ರವರ 118ನೇ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು.
ಡಾ|| ಬಾಬು ಜಗಜೀವನರಾಂ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಬಿ ರೇಖಾ ರಮೇಶ್ , ಕಾರ್ಯನಿರ್ವಾಹಕ ಅಧಿಕಾರಿ ಡಾ|| ಬಿ ಆನಂದಕುಮಾರ್ , ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎ. ನಸರುಲ್ಲಾ, ತಾಲೂಕು ಡಾ|| ಬಿ. ಆರ್. ಅಂಬೇಡ್ಕರ್ ಸಂಘದ ಅಧ್ಯಕ್ಷರಾದ ಬಿ ದುರುಗಪ್ಪ, ಎ.ಪಿ.ಎಂ.ಸಿ ಉಪಾಧ್ಯಕ್ಷ ಶಿವಣ್ಣ, ರೈತ ಮುಖಂಡರಾದ ಭರಮಣ್ಣ, ಜಯಪ್ರಕಾಶ್ ನಾಯ್ಕ, ಸಮುದಾಯ ಆರೋಗ್ಯ ಕೇಂದ್ರದ ಡಾ.ಬದ್ಯಾನಾಯ್ಕ, ಶಿಕ್ಷಣ ಇಲಾಖೆಯ ಸಿ.ಅಜ್ಜಪ್ಪ, ಬಿಸಿಎಂ ಇಲಾಖೆಯ ವಾರ್ಡ್ನ್ ವೀರೇಶ ತುಪ್ಪದ, ಸದಾನಂದಯ್ಯ, ಹಾಲಸ್ವಾಮಿ ಕಂದಾಯ ನಿರೀಕ್ಷಕರು, ಉಪತಹಶೀಲ್ದಾರ್ ಅನ್ನದಾನೇಶ ಬಿ ಪತ್ತಾರ, ಸಂಘಟನೆಯ ವಿವಿಧ ಪದಾಧಿಕಾರಿಗಳು, ವಿವಿಧ ಇಲಾಖೆಯ ಸಿಬ್ಬಂದಿ, ಕಛೇರಿಯ ಸಿಬ್ಬಂದಿ ಹಾಜರಿದ್ದರು.
ಡಿಎಸ್ಎಸ್ ಜಿಲ್ಲಾ ಮುಖಂಡರಾದ ತೆಗ್ಗಿನಕೇರಿ ಕೊಟ್ರೇಶ್, ಬದ್ದಿ ಮರಿಸ್ವಾಮಿ ತಾಲೂಕು ಡಾ|| ಬಾಬು ಜಗಜೀವನರಾಂ ಸಂಘದ ಅಧ್ಯಕ್ಷರಾದ ಹನುಮಂತಪ್ಪ ವಕೀಲರು, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷರಾದ ಜಿ ಸಿದ್ದಯ್ಯ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರರ ಅಮರೇಶ್ ಜಿ ಕೆ ಅಧ್ಯಕ್ಷೀಯ ನುಡಿಗಳನ್ನು ನುಡಿದರು. ಸಿ.ಮ.ಗುರುಬಸವರಾಜ ಕಾರ್ಯಕ್ರಮ ನಿರೂಪಿಸಿದರು.
- ಕರುನಾಡ ಕಂದ
