ಬಳ್ಳಾರಿ / ಕಂಪ್ಲಿ : ಸ್ಥಳೀಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ತ ಸಂಗ್ರಹಣಾ ಘಟಕ ಮತ್ತು ಗರ್ಭಿಣಿಯರ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಹಾಗೂ ಮಕ್ಕಳ ತೀವ್ರ ನಿಗಾ ಘಟಕಕ್ಕೆ ಶಾಸಕ ಜೆ.ಎನ್.ಗಣೇಶ್ ಶನಿವಾರ ಚಾಲನೆ ನೀಡಿದರು.
ನಂತರ ಶಾಸಕ ಜೆ.ಎನ್.ಗಣೇಶ್ ಮಾತನಾಡಿ, ಆಸ್ಪತ್ರೆಯಲ್ಲಿ ಸಿಗುವ ಚಿಕಿತ್ಸೆಯ ಸೌಲಭ್ಯಗಳನ್ನು ಜನರು ಸದ್ಭಳಕೆ ಮಾಡಿಕೊಳ್ಳಬೇಕು, ಆಧುನಿಕ ಯುಗದಲ್ಲಿ ರೋಗ ರುಜಿನಗಳು ಹೆಚ್ಚಾಗುತ್ತಿದ್ದು, ಜನರು ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದರು.
ಈ ಸಂದರ್ಭದಲ್ಲಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರವೀಂದ್ರ ಕನಿಕೇರಿ, ತಾಲೂಕು ಆರೋಗ್ಯ ಅಧಿಕಾರಿ ಡಾ.ಅರುಣ್‌ಕುಮಾರ, ವೈದ್ಯಾಧಿಕಾರಿಗಳಾದ ವಿರೇಶ, ನಂದೀಶ, ಮಲ್ಲೇಶಪ್ಪ, ವಿಶ್ವನಾಥ, ಭರತ್ ಪದ್ಮಶಾಲಿ, ಹಾರಿಕಾ, ಶ್ರೀನಿವಾಸ, ಹೆಚ್.ಪ್ರಕಾಶ್ ಗೌಡ , ಸಿಬ್ಬಂದಿಗಳಾದ ಚನ್ನಬಸಪ್ಪ, ಲಕ್ಮಿ, ಮಹಾಂತೇಶ, ದೇವಣ್ಣ ಸೇರಿದಂತೆ ಇತರರು ಇದ್ದರು.
ವರದಿ : ಜಿಲಾನ್ ಸಾಬ್ ಬಡಿಗೇರ.
