ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಉದ್ಘಾಟನೆ

ವರ್ಷದೊಳಗೆ ಓಪಿಸಿ ಜಾರಿಗೆ ಪ್ರಯತ್ನ : ನೌಕರ ಸದೃಢ ಆರೋಗ್ಯಕ್ಕೆ ಕ್ರೀಡೆಯೂ ಅಗತ್ಯ: ಶಾಸಕ ಎನ್. ಎಚ್. ಕೋನರಡ್ಡಿ

ಧಾರವಾಡ : ರಾಜ್ಯ ಸರ್ಕಾರಿ ನೌಕರರು ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ಸರಕಾರದ ಸಮಾಜಮುಖಿ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುತ್ತಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಆಗಿರುವ ಎನ್‍ಪಿಎಸ್ ರದ್ದುಪಡಿಸಿ, ಓಪಿಎಸ್ ಜಾರಿಗೊಳಿಸಲು ಸರ್ಕಾರ ಬದ್ಧವಾಗಿದ್ದು, ಈ ವರ್ಷದೊಳಗೆ ಎಲ್ಲಾ ರಾಜ್ಯ ಸರ್ಕಾರಿ ನೌಕರರಿಗೆ ಓಪಿಸಿ ಅನ್ವಯಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಶಾಸಕ ಎನ್. ಎಚ್. ಕೋನರಡ್ಡಿ ಅವರು ಹೇಳಿದರು.

ಅವರು ಇಂದು (ಏ.05) ಬೆಳಿಗ್ಗೆ ನಗರದ ಆರ್. ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಜಿಲ್ಲಾ ಶಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಉದ್ಘಾಟಸಿ, ಮಾತನಾಡಿದರು.

ರಾಜ್ಯ ಸರ್ಕಾರವು ಸರ್ಕಾರಿ ನೌಕರರ ಹಿತಾಸಕ್ತಿ ಕಾಪಾಡಲು ಅನೇಕ ಉಪಯುಕ್ತ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಎನ್‍ಪಿಎಸ್ ರದ್ದುಗೊಳಿಸಿ, ಓಪಿಸಿ ಜಾರಿಗೆ ತರಲು ಸರ್ಕಾರ ತೀರ್ಮಾನಿಸಿದೆ. ಅಧ್ಯಯನ ಸಮಿತಿಯು ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ತಕ್ಷಣ ಸರಕಾರ, ಅಧ್ಯಯನ ಮಾಡಿ ನಿರ್ಧಾರ ಪ್ರಕಟಿಸಲಿದೆ ಎಂದು ಶಾಸಕ ಎನ್.ಎಚ್.ಕೋನರಡ್ಡಿ ಅವರು ಹೇಳಿದರು.

ನೌಕರರು ಕೆಲಸದ ಒತ್ತಡದಲ್ಲಿ ತಮ್ಮ ಕೌಟುಂಬಿಕ ಜೀವನ, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬಾರದು. ಪ್ರತಿದಿನ ವ್ಯಾಯಾಮ, ನಡಿಗೆ, ಯೋಗ ಮಾಡಿ, ಪಿಟನೆಸ್ ಹೊಂದಬೇಕು ಎಂದು ತಿಳಿಸಿದರು.

ಪ್ರತಿಯೊಬ್ಬರು ದೈಹಿಕ ಮತ್ತು ಮಾನಸಿಕ ಸದೃಡತೆಗೆ ಆರೋಗ್ಯ ಮುಖ್ಯವಾಗಿದೆ. ಉತ್ತಮವಾದ ಓದು, ವ್ಯಾಯಾಮಗಳು ಮನಸ್ಸಿಗೆ ಉಲ್ಲಾಸ, ವಿಶ್ರಾಂತಿ ನೀಡುತ್ತವೆ. ಖುಷಿಯಿಂದ ಕೆಲಸ ಮಾಡಲು ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮಗಳ ಅಗತ್ಯವಿದೆ ಎಂದು ಶಾಸಕರು ಹೇಳಿದರು.

ಮುಖ್ಯ ಅತಿಥಿಗಳಾಗಿದ್ದ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿ, ನಮ್ಮ ಮಾನಸಿಕ ಚಿಂತನೆಗಳು ದೈಹಿಕ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತವೆ. ಮನಸಿಗೆ ಚೈತನ್ಯ ತುಂಬಲು ಕೆಲಸ, ಕಾರ್ಯಗಳನ್ನು ಅನುಕರಣೀಯ ಮಾಡದೆ, ಹೊಸತನ ಕಾಣಬೇಕು ಎಂದರು.

ಇಂದಿನ ಜನಪರ, ಜನಕಲ್ಯಾಣ ಕಾರ್ಯಕ್ರಮಗಳಿಂದ ಸರ್ಕಾರಿ ನೌಕರರ ಕಾರ್ಯ, ಚಟುವಟಿಕೆಗಳ ಮೇಲೆ ಸಾಕಷ್ಟು ಒತ್ತಡ ಉಂಟಾಗುತ್ತಿದೆ. ಇಂತ ಸಂದರ್ಭದಲ್ಲಿ ನಿರಂತರ ಯೋಗ, ವ್ಯಾಯಾಮ, ಕ್ರೀಡಾ ಚಟುವಟಿಕೆಗಳು ನಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯದ ಸುಸ್ಥಿತಿ ಕಾಪಾಡಲು ಸಹಾಯ ಮಾಡುತ್ತವೆ. ಪ್ರತಿ ದಿನ ಯೋಗ, ವಾಕಿಂಗ್ ಮಾಡಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.

ಕ್ರೀಡಾಕೂಟದಲ್ಲಿ ಸೋಲು ಗೆಲವು ಎಂಬುದು ಇಲ್ಲ. ಗೆಲವು ಸಿಗುತ್ತದೆ ಅಥವಾ ಆ ಕ್ರೀಡೆಯಿಂದ ಹೊಸದನ್ನು ಕಲಿಯುತ್ತೇವೆ. ಆದ್ದರಿಂದ ಗೆಲವು ಅಥವಾ ಕಲಿಕೆ ಮಾತ್ರ ಕ್ರೀಡೆಯಿಂದ ಸಿಗುತ್ತದೆ. ಕ್ರೀಡೆಗಳು ಪರಸ್ಪರ ವಯಕ್ತಿಕ ಸಂಬಂಧ, ಸೌರ್ಹಾದತೆ, ಸಹೋದರತ್ವ ಗಟ್ಟಿಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದರು.

ಜಿಲ್ಲೆಯ ಸರ್ಕಾರಿ ನೌಕರರಲ್ಲಿ ಸೂಪ್ತವಾಗಿರುವ ಕ್ರೀಡೆ ಸಾಂಸ್ಕೃತಿಕ ಪ್ರತಿಭೆಯನ್ನು ಪ್ರದರ್ಶಿಸಲು ಅನುಕೂಲವಾಗುವಂತೆ ಈ ವರ್ಷ ಕಂದಾಯ ದಿನಾಚರಣೆ, ಆರ್.ಡಿ.ಪಿ.ಆರ್ ದಿನಾಚರಣೆ ಹಾಗೂ ಪ್ರೆಂಡ್ಲಿ ಮ್ಯಾಚ್‍ಗಳನ್ನು ಆಯೋಜಿಸಲಾಗುತ್ತಿದೆ. ಎಲ್ಲ ನೌಕರರು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ನಾವು ಜನರ ಸೇವೆ, ರಕ್ಷಣೆ ಮಾಡಿ ಅವರ ಹಿತ ಕಾಪಾಡಿದರೆ; ದೇವರು ನಮ್ಮನ್ನು ರಕ್ಷಿಸಿ, ನಮ್ಮ ಹಿತ ಕಾಪಾಡುತ್ತಾನೆ. ಸಿಕ್ಕಿರುವ ಸರ್ಕಾರಿ ಸೇವೆಯ ಅವಕಾಶವನ್ನು ನಿಷ್ಠೆ, ಪ್ರಾಮಾಣಿಕತೆಯಿಂದ ಮಾಡಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.

ರಾಜ್ಯ ಸರ್ಕಾರಿ ನೌಕರ ಸಂಘದ ಜಿಲ್ಲಾ ಅಧ್ಯಕ್ಷ ಎಸ್.ಎಫ್.ಸಿದ್ದನಗೌಡರ ಪ್ರಾಸ್ತಾವಿಕವಾಗಿ ಮಾತನಾಡಿ, ವಿವಿಧ ಬೇಡಿಕೆಗಳನ್ನು ಪ್ರಸ್ತಾಪಿಸಿದರು. ಗೌರವಾಧ್ಯಕ್ಷ ಮಲ್ಲಿಕಾರ್ಜುನ ಸೊಲಗಿ ಸ್ವಾಗತಿಸಿದರು. ಕ್ರೀಡಾ ಕಾರ್ಯದರ್ಶಿ ಸುರೇಶ ಜಟ್ಟೆನವರ ಕ್ರೀಡಾ ಪ್ರತಿಜ್ಞಾ ವಿಧಿ ಬೋಧಿಸಿದರು. ಖಜಾಂಚಿ ಮಂಜುನಾಥ ಯಡಳ್ಳಿ ಅವರು ಕ್ರೀಡಾ ಸಾಧಕರಿಗೆ ಪ್ರಶಂಸನಾ ಪತ್ರ ವಿತರಿಸಿದರು. ಕ್ರೀಡಾ ಕಾರ್ಯದರ್ಶಿ ಪಿ.ಎಫ್.ಗುಡೇನಕಟ್ಟಿ ವಂದಿಸಿದರು. ಜಿಲ್ಲಾ ಕಾರ್ಯದರ್ಶಿ ರಮೇಶ ಲಿಂಗದಾಳ ಕಾರ್ಯಕ್ರಮ ನಿರೂಪಿಸಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ ಎಮ್.ಟಿ., ಸಂಘದ ಕಾರ್ಯಾಧ್ಯಕ್ಷ ಪ್ರಕಾಶ ಹಳಪೇಠ, ರಾಜ್ಯ ಪರಿಷತ ಸದಸ್ಯ ದೇವಿದಾಸ ಶಾಂತಿಕರ, ಕ್ರೀಡಾ ಕಾರ್ಯದರ್ಶಿ ಅಯ್ಯಪ್ಪ ಮೊಖಾಶಿ ಹಾಗೂ ತಾಲೂಕು ಅಧ್ಯಕ್ಷರಾದ ವಿ.ಎಫ್. ಚುಳಕಿ, ವಿಠ್ಠಲ ರಂಗಣ್ಣವರ, ಜಗದೀಶ ಎಸ್.ವಿರಕ್ತಮಠ, ಮುತ್ತಪ್ಪ ಅಣ್ಣಿಗೇರಿ, ಎಂ.ಎ.ತಹಶೀಲ್ದಾರ, ಡಾ.ಪ್ರಲ್ಹಾದ ಗೆಜ್ಜಿ ಸೇರಿದಂತೆ ನೌಕರ ಸಂಘದ ಜಿಲ್ಲಾ ಘಟಕದ ಹಿರಿಯ ಉಪಾಧ್ಯಕ್ಷರು, ಉಪಾಧ್ಯಕ್ಷರು, ವಿವಿಧ ಪದಾಧಿಕಾರಿಗಳು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಕ್ರೀಡಾಪಟುಗಳು, ರಾಜ್ಯ ಸರ್ಕಾರಿ ನೌಕರ ಸಂಘದ ಸದಸ್ಯರು, ವಿವಿಧ ತಾಲೂಕಿನ ಪದಾಧಿಕಾರಿ, ಸದಸ್ಯರು ಭಾಗವಹಿಸಿದ್ದರು.

ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ