ಬಳ್ಳಾರಿ / ಕಂಪ್ಲಿ: ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಮದರ್ ತೆರೇಸಾ ಪಿಯು ಕಾಲೇಜಿನ ವಿದ್ಯಾರ್ಥಿನಿ ಕೋರಿ ಅಂಬಿಕಾ ವಾಣಿಜ್ಯ ವಿಭಾಗದಲ್ಲಿ ಒಟ್ಟು 584 ಅಂಕಗಳು (97.33%) ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವರ ಸಾಧನೆಯು ಕಂಪ್ಲಿಗೆ ಗೌರವ ತಂದುಕೊಟ್ಟಿದೆ.
ಕಲಾ ವಿಭಾಗದ ವಿದ್ಯಾರ್ಥಿನಿ ಜಡೆಮ್ಮ ಅವರು 538 ಅಂಕಗಳು (89.66%) ಪಡೆದು ಉತ್ತಮ ಫಲಿತಾಂಶ ಗಳಿಸಿದ್ದಾರೆ.
ಪುಷ್ಪವತಿ ವಿಶ್ವಕರ್ಮ (ವಾಣಿಜ್ಯ): 520 ಅಂಕಗಳು (86.66%)
ಒಟ್ಟು 25 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದರೆ, ಕಾಲೇಜಿನ ಶ್ರೇಷ್ಠತೆಯನ್ನು ತೋರಿಸಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರು ಹರ್ಷ ವ್ಯಕ್ತಪಡಿಸಿದ್ದಾರೆ.
ಕಾಲೇಜಿನ ಆಡಳಿತ ಮಂಡಳಿ ಹಾಗೂ ಉಪನ್ಯಾಸಕ ವೃಂದವು ವಿದ್ಯಾರ್ಥಿನಿಯರ ಸಾಧನೆಗೆ ಅಭಿನಂದನೆಗಳನ್ನು ತಿಳಿಸಿದರು.
ವರದಿ : ಜಿಲಾನ್ ಸಾಬ್ ಬಡಿಗೇರ.
