ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜಿಲ್ಲಾಧಿಕಾರಿ ಕಚೇರಿ ಎದುರಿನ ಮೈದಾನ ವಿವಾದಕ್ಕೆ ತೆರೆ

ಶಿವಮೊಗ್ಗ: ಬಿಜೆಪಿ ಮತ್ತು ಪರಿವಾರ ಸಂಘಟನೆಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಇಚ್ಛಾಶಕ್ತಿಗೆ ಜಯ
ಸಿಕ್ಕಂತಾಗಿದೆ ಎಂದು ಶಿವಮೊಗ್ಗ ಶಾಸಕ ಶ್ರೀ ಎಸ್ ಎನ್ ಚನ್ನಬಸಪ್ಪ ಅವರು ಹರ್ಷ ವ್ಯಕ್ತ ಪಡಿಸಿದ್ದಾರೆ.

ಶಿವಮೊಗ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರಿನ ಮೈದಾನ ಶಿವಮೊಗ್ಗ ನಗರದ ನಾಗರೀಕರ ಅತ್ಯಂತ ಹೆಚ್ಚಿನ ವಾಹನ ಚಲನವಲನ ಇರುವ ಸ್ಥಳವಾಗಿದ್ದು, ಕಚೇರಿಗೆ ಬರುತ್ತಿರುವ ಸಾರ್ವಜನಿಕರಿಗೆ ಹಾಗೂ ವಿವಿಧ ಮೂಲಗಳಿಂದ ಕಾರ್ಯಕ್ಕಾಗಿ ಭೇಟಿ ನೀಡುವ ಜನರಿಗೆ ಅನುಕೂಲವಾಗುವ ಸ್ಥಳವಾಗಿದೆ.

ಹಲವು ದಿನಗಳಿಂದ ಸಾರ್ವಜನಿಕರಲ್ಲಿ ಚರ್ಚೆಗೆ ಕಾರಣವಾಗಿದ್ದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಮೈದಾನದ ಸಂಬಂಧಿತ ವಿವಾದ ಇದೀಗ ಸುಖಾಂತ್ಯ ಕಂಡಿರುವುದು ಅತ್ಯಂತ ಸಂತೋಷದ ಸಂಗತಿ. ಸಂಬಂಧಿತ ಇಲಾಖೆಗಳ ನಡುವಿನ ಸಮಾಲೋಚನೆ ಹಾಗೂ ನಿರ್ಧಾರಗಳ ಬಳಿಕ, ಮೈದಾನವನ್ನು ಸಾರ್ವಜನಿಕ ವಾಹನ ಪಾರ್ಕಿಂಗ್‌ಗಾಗಿ ಮತ್ತೆ ತೆರೆಯುತ್ತಿರುವುದು ಶಿವಮೊಗ್ಗ ನಗರದ ನಾಗರಿಕರಿಗೆ ಸಂತಸವನ್ನು ತಂದಿದೆ. ಇದು ಬಿಜೆಪಿ ಮತ್ತು ಪರಿವಾರ ಸಂಘಟನೆಗಳು, ಜನಪ್ರತಿನಿಧಿಗಳು ಹಾಗೂ ಶಿವಮೊಗ್ಗದ ಪ್ರಜ್ಞಾವಂತ ನಾಗರೀಕರ ಇಚ್ಛಾಶಕ್ತಿಗೆ ಸಿಕ್ಕ ಜಯವಾಗಿದೆ.

ಈ ಸಂದರ್ಭದಲ್ಲಿ ಬಿಜೆಪಿ ಮತ್ತು ಪರಿವಾರ ಸಂಘಟನೆಗಳು, ಜನಪ್ರತಿನಿಧಿಗಳು ಹಾಗೂ ನಗರದ ಶಾಂತಿಯುತ ವಾತಾವರಣವನ್ನು ಕಾಯ್ದುಕೊಂಡ ಪ್ರಜ್ಞಾವಂತ ಶಿವಮೊಗ್ಗ ನಾಗರಿಕರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಈ ವಿವಾದನು ಬಗೆಹರಿಸುವಲ್ಲಿ ಯಶಸ್ವಿಯಾದ ಜಿಲ್ಲಾಧಿಕಾರಿಗಳಿಗೆ ಹಾಗೂ ರಕ್ಷಣಾಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಶಿವಮೊಗ್ಗ ಶಾಸಕ ಶ್ರೀ ಎಸ್.ಎನ್ ಚನ್ನಬಸಪ್ಪ (ಚೆನ್ನಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ