ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಎಸ್.ಎಸ್.ಎಲ್.ಸಿ ಯಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಕಂಪ್ಲಿಯ ರೈನ್‌ಬೋ ಕಾಲೇಜಿನಲ್ಲಿ ಉಚಿತ ಶಿಕ್ಷಣ ವಸತಿ : ಕೆ. ಎಸ್. ಚಾಂದ್‌ಬಾಷಾ

ಬಳ್ಳಾರಿ / ಕಂಪ್ಲಿ : ಸ್ಥಳೀಯ ಸಣಾಪುರ ರಸ್ತೆಯಲ್ಲಿರುವ ಕೆಸಿಬಿ ಎಜ್ಯುಕೇಷನಲ್ ಟ್ರಸ್ಟ್, ರೈನ್‌ಬೋ ಸಮೂಹ ವಿದ್ಯಾಸಂಸ್ಥೆಯ ರೈನ್‌ಬೋ ಪಿಯು ಕಾಲೇಜಿನಲ್ಲಿ ಹತ್ತನೇ ತರಗತಿಯಲ್ಲಿ 2025- 26ನೇ ಸಾಲಿಯಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದ ಬಳ್ಳಾರಿ ಜಿಲ್ಲೆಯ 20 ವಿದ್ಯಾರ್ಥಿಗಳಿಗೆ ಉಚಿತವಾಗಿ ಶಿಕ್ಷಣ ಹಾಗೂ ವಸತಿಯನ್ನು ಕಲ್ಪಿಸಲಾಗುವುದು ಎಂದು ಕೆಸಿಬಿ ಎಜ್ಯುಕೇಷನಲ್ ಟ್ರಸ್ಟ್ ನ ಅಧ್ಯಕ್ಷ ಕೆ.ಎಸ್.ಶಾರುಖ್ ಮತ್ತು ಕಾರ್ಯದರ್ಶಿ ಕೆ.ಎಸ್.ಚಾಂದ್‌ಬಾಷಾ ತಿಳಿಸಿದರು.
ಅವರು ಶುಕ್ರವಾರ ಕಂಪ್ಲಿ ಪಟ್ಟಣದ ಸಣಾಪುರ ರಸ್ತೆಯಲ್ಲಿರುವ ಕೆಸಿಬಿ ಎಜ್ಯಕೇಷನಲ್ ಟ್ರಸ್ಟ್ ನ ರೈನ್‌ಬೋ ಕಾಲೇಜಿನಲ್ಲಿ ಏರ್ಪಡಿಸಿದ್ದ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿ ಬಳ್ಳಾರಿ ಜಿಲ್ಲೆಯ 5 ತಾಲ್ಲೂಕುಗಳಾದ ಕಂಪ್ಲಿ, ಕುರುಗೋಡು, ಸಿರಗುಪ್ಪ, ಬಳ್ಳಾರಿ ಮತ್ತು ಸಂಡೂರು ತಾಲ್ಲೂಕಗಳಲ್ಲಿ ಹತ್ತನೇ ತರಗತಿಯ ಕನ್ನಡ ಮಾಧ್ಯಮ, ಆಂಗ್ಲ ಮಾಧ್ಯಮ, ಸಿಬಿಎಸ್‌ಇಮತ್ತು ಐಸಿಎಸ್‌ಇ ಪಠ್ಯಕ್ರಮದಲ್ಲಿ ವಿದ್ಯಾಭ್ಯಾಸ ಮಾಡಿ ಆಯಾ ತಾಲ್ಲೂಕಿನಲ್ಲಿಯೇ ಅತೀ ಹೆಚ್ಚು ಅಂಕಗಳನ್ನು ಪಡೆದ ಪ್ರತಿ ತಾಲ್ಲೂಕಿನ ೪ ವಿದ್ಯಾರ್ಥಿಗಳಿಗೆ ಪ್ರಥಮ ಹಾಗೂ ದ್ವಿತೀಯ ಪಿಯುನಲ್ಲಿ ನಮ್ಮ ಸಂಸ್ಥೆಯ ರೈನ್‌ಬೋ ಪಿಯು ಕಾಲೇಜಿನಲ್ಲಿ ಉಚಿತ ವಸತಿಯ ಜೊತೆಗೆ ಉಚಿತ ಶಿಕ್ಷಣವನ್ನು ನೀಡಲಾಗುವುದು, ಜೊತೆಗೆ ಉಚಿತ ಶಿಕ್ಷಣದ ಜೊತೆಗೆ ಯಾವುದೇ ಶುಲ್ಕವಿಲ್ಲದೆ ನೀಟ್, ಕೆಸೆಟ್ ಮತ್ತು ಜೆಇಇ ತರಬೇತಿಯನ್ನು ಅತ್ಯಂತ ಅನುಭವವುಳ್ಳ, ನುರಿತ ಉಪನ್ಯಾಸಕರಿಂದ ನೀಡಲಾಗುವುದು. ಒಬ್ಬ ವಿದ್ಯಾರ್ಥಿಗೆ ಒಂದು ವರ್ಷಕ್ಕೆ ಅಂದಾಜು 1.40.000 ರೂಗಳ ಉಚಿತ ಶಿಕ್ಷಣ ಮತ್ತು ವಸತಿ ಒದಗಿಸಲಾಗುವುದು ಎಂದು ವಿವರಿಸಿದರು. ನಮ್ಮ ರೈನ್‌ಬೋ ಸಮೂಹ ಶಿಕ್ಷಣ ಸಂಸ್ಥೆಗೆ ಪ್ರಸಕ್ತ ಸಾಲಿನಲ್ಲಿ ಐಸಿಎಸ್‌ಇ (ICSE) ಪಠ್ಯಕ್ರಮದಲ್ಲಿ ಬೋಧನೆಗೆ ಪರವಾನಿಗೆ ದೊರೆತಿದ್ದು, ಪ್ರಸಕ್ತ ಸಾಲಿನಲ್ಲಿ ಐಸಿಎಸ್‌ಇ (ICSE) ಪಠ್ಯಕ್ರಮಕ್ಕೆ ದಾಖಲಾತಿ ಆರಂಭವಾಗಿದ್ದು, ಕಂಪ್ಲಿ ತಾಲ್ಲೂಕು ಸೇರಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಪಾಲಕ ಮತ್ತು ಫೋಷಕರು ಇದರ ಸದುಪಯೋಗವನ್ನು ಪಡೆದುಕೊಂಡು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ಕೊಡಿಸುವಲ್ಲಿ ಮುಂದಾಗಬೇಕೆಂದು ಮನವಿ ಮಾಡಿದರು.
ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ :
9880 90477, 99805 72088, 99009 88020, 81230 09051, 94942 27727 ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಪದಾಧಿಕಾರಿಗಳಾದ ಕೆ ಎಸ್ ಮಹೇಬೂಬ್, ಪ್ರಾಂಶುಪಾಲರಾದ ಶ್ರೀನಿವಾಸ್, ಉಪನ್ಯಾಸಕರಾದ ಶಂಶೇರ್, ಮೇಘನಾ ಸೇರಿದಂತೆ ಇತರರಿದ್ದರು.

ವರದಿ : ಜಿಲಾನ್ ಸಾಬ್ ಬಡಿಗೇರ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ