ಕೊಪ್ಪಳ :ಡಾ. ಬಿ. ಆರ್ ಅಂಬೇಡ್ಕರ್ ಅವರು ಎಲ್ಲಾ ಸಮುದಾಯಗಳ ಆಶಾಕಿರಣವಾಗಿದ್ದಾರೆ ಎಂದು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯ ಡಾ. ಗಣಪತಿ ಲಮಾಣಿಯವರು ಹೇಳಿದರು.
ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿಯಲ್ಲಿ ಮಾತನಾಡುತ್ತ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಪ್ರತಿಯೊಂದು ಸಮುದಾಯಗಳಿಗೆ ಸೌಲಭ್ಯಗಳನ್ನು ಮತ್ತು ಮೀಸಲಾತಿಯನ್ನು ನೀಡಿದ್ದಾರೆ. ಬಡ ಜನರಿಗಾಗಿ ಅಂಬೇಡ್ಕರ್ ಅವರು ಜೀವನ ಪರ್ಯಂತ ಹೋರಾಟ ಮಾಡಿದ್ದಾರೆ. ಅಂಬೇಡ್ಕರ್ ಅವರು ಹೇಳಿರುವ ಶಿಕ್ಷಣಕ್ಕೆ ಸಂಬಂಧ ಪಟ್ಟ ವಿಚಾರಗಳನ್ನು, ಅವರ ನೀತಿಗಳನ್ನು ಮತ್ತು ಅವರ ತತ್ವಗಳನ್ನು ನಾವೆಲ್ಲರೂ ಪಾಲಿಸೋಣ ಎಂದು ಅಭಿಪ್ರಾಯ ಪಟ್ಟರು.
ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ನರಸಿಂಹ ಅವರು ಮಾತನಾಡುತ್ತಾ ಅಂಬೇಡ್ಕರ್ ಅವರು ಶಿಕ್ಷಣ ಹೆಚ್ಚು ಒತ್ತು ಕೊಟ್ಟಿದ್ದಾರೆ. ಅವರು ದೇಶ, ವಿದೇಶಗಳಲ್ಲಿ ಅಭ್ಯಾಸ ಮಾಡಿ ಬಂದು ಭಾರತದಲ್ಲಿ ನೆಲೆಸಿ ತಳ ಸಮುದಾಯಗಳ ಉದ್ದಾರಕ್ಕಾಗಿ ಹೋರಾಟ ಮಾಡಿದರು. ಅಂಬೇಡ್ಕರ್ ಅವರು 54 ಸಾವಿರ ಪುಸ್ತಕಗಳನ್ನು ಓದಿದ್ದಾರೆ. ಅವರನ್ನು ವಿಶ್ವ ಜ್ಞಾನಿ ಎಂದು ಕರೆಯುತ್ತಾರೆ ಎಂದು ತಿಳಿಸಿದರು. ಅಂಬೇಡ್ಕರ್ ಅವರು ಶಿಕ್ಷಣ, ಸಂಘಟನೆ ಮತ್ತು ಹೋರಾಟ ಈ ಮೂರು ಸೂತ್ರಗಳನ್ನು ನಾವೆಲ್ಲರೂ ಪಾಲಿಸೋಣ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರಾದ ಶ್ರೀ ವಿಠೋಬ ಎಸ್, ಡಾ. ಹುಲಿಗೆಮ್ಮ ಬಿ, ಡಾ. ಮಲ್ಲಿಕಾರ್ಜುನ ಬಿ. ಡಾ. ಪ್ರದೀಪ್ ಕುಮಾರ ಯು. ಹನುಮಪ್ಪ ಮೇಟಿ, ಶಿವಪ್ರಸಾದ್ ಹಾದಿಮನಿ, ಕಲ್ಲಯ್ಯ ಪೂಜಾರ್, ನಿಂಗಪ್ಪ, ಹಾಗೂ ಇತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಡಾ. ಪ್ರದೀಪ್ ಕುಮಾರ್ ನಿರೂಪಿಸಿ, ವಂದಿಸಿದರು.
- ಕರುನಾಡ ಕಂದ
