ಬಳ್ಳಾರಿ / ಕಂಪ್ಲಿ : ಪಟ್ಟಣದ ಹೊಸ ಬಸ್ ನಿಲ್ದಾಣ ಹತ್ತಿರ ಇರುವ ಮೈಕಲ್ ಜಾಕ್ಸನ್ ಡ್ಯಾನ್ಸ್ ಸ್ಕೂಲ್ ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು.
ಡ್ಯಾನ್ಸ್ ಮಾಸ್ಟರ್ ಮುನ್ನಾ ಮಾತನಾಡಿ 1891ರಲ್ಲಿ ಜನಿಸಿದ ಅಂಬೇಡ್ಕರ್ ಅವರು ಭಾರತ ಸಂವಿಧಾನದ ಶಿಲ್ಪಿ ಮಾತ್ರವಲ್ಲ, ಸ್ವತಂತ್ರ ಭಾರತದ ಮೊದಲ ಕಾನೂನು ಮಂತ್ರಿ, ನ್ಯಾಯಶಾಸ್ತ್ರಜ್ಞ, ಅರ್ಥಶಾಸ್ತ್ರಜ್ಞ ಮತ್ತು ಸಮಾಜ ಸುಧಾರಕರೂ ಆಗಿದ್ದರು.
ಅವರು ಅಸ್ಪೃಶ್ಯರ ವಿರುದ್ಧದ ತಾರತಮ್ಯವನ್ನು ತೊಡೆದು ಹಾಕಲು ಮತ್ತು ಮಹಿಳೆಯರು ಹಾಗೂ ಕಾರ್ಮಿಕರ ಹಕ್ಕುಗಳಿಗಾಗಿ ಹೋರಾಡಲು ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಆದ್ದರಿಂದ ಅವರ ಜನ್ಮ ವಾರ್ಷಿಕೋತ್ಸವವನ್ನು ಸಮಾನತೆಯ ದಿನ ಎಂದೂ ಕರೆಯಲಾಗುತ್ತದೆ ಎಂದು ಹೇಳಿದರು. ಡ್ಯಾನ್ಸ್ ಸ್ಕೂಲಿನ ವಿದ್ಯಾರ್ಥಿಗಳು ಸಂವಿಧಾನದ ಪ್ರಸ್ತಾವನೆಯನ್ನು ಓದಿದರು. ಅಂಬೇಡ್ಕರ್ ರವರ ಹಾಡಿಗೆ ವಿದ್ಯಾರ್ಥಿಗಳು ನೃತ್ಯವನ್ನು ಮಾಡಿ ಪಾಲಕರ ಮನಸೂರೆಗೊಂಡರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಾದ ರಘುನಂದನ್, ಹರ್ಷವರ್ಧನ್, ಯಶ್ವಂತ್ , ಕಾರ್ತಿಕ್ , ಅಭಿನಂದನ, ಪವನ ಕುಮಾರ್ , ನವ್ಯ , ಮಹಾಲಕ್ಷ್ಮಿ, ಜ್ಞಾನಶ್ರೀ ಮತ್ತು ಆರಾಧ್ಯ ಸೇರಿದಂತೆ ಪಾಲಕರಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್.
