ಕಲಬುರಗಿ: ಜಿಲ್ಲಾ ಅಧ್ಯಕ್ಷರು ಮತ್ತು ಜಿಲ್ಲಾ ಘಟಕ ಹಾಗೂ ತಾಲೂಕು ಅಧ್ಯಕ್ಷರನ್ನು ಸಂಘದ ರಾಜ್ಯ ಅಧ್ಯಕ್ಷರಾದ ಶ್ರೀ ಸುಧಾಕರ್ ರವರ ಸಮ್ಮಖದಲ್ಲಿ, ಕಲಬುರಗಿ ಜಿಲ್ಲೆಯ ಜಿಲ್ಲಾ ಅಧ್ಯಕ್ಷರನ್ನಾಗಿ ಶ್ರೀ ಧರ್ಮು ಚಿನ್ನಿ ರಾಠೋಡ ರವರನ್ನು ನೇಮಕ ಮಾಡುವ ಮೂಲಕ, ಜಿಲ್ಲಾ ಪದಾಧಿಕಾರಿಗಳನ್ನು ಮತ್ತು ತಾಲ್ಲೂಕು ಅಧ್ಯಕ್ಷರನ್ನು ನೇಮಕ ಮಾಡಲಾಯಿತು.
ಈ ಸಂಘದ ಉದ್ದೇಶ, ಹೊರಗುತ್ತಿಗೆ ಆಧಾರದ ಮೇಲೆ ಸುಮಾರು 36 ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಲವಾರು ಸಂಖ್ಯೆಯಲ್ಲಿ ಇದ್ದಾರೆ ಆದರೆ ಅವರ ಕೆಲಸಕ್ಕೆ ಸಮನಾದ ವೇತನ ಇಲ್ಲದೆ, ಮತ್ತು ಸೇವಾ ಭದ್ರತೆ ಇಲ್ಲದೆ ಸುಮಾರು 20 ರಿಂದ 30 ವರ್ಷಗಳ ಕಾಲ ಕಾರ್ಯ ನಿರ್ವಹಿಸುತ್ತಿದ್ದಾರೆ. ಹಾಗಾಗಿ ಕೋರ್ಟ್ ಆದೇಶದಂತೆ ಅವರನ್ನು ಸಮಾನ ಕೆಲಸಕ್ಕೆ ಸಮಾನ ವೇತನ ಒದಗಿಸಿ ಅವರನ್ನು ಸರ್ಕಾರ ಭರವಸೆಗೆ ಪಡೆದುಕೊಂಡು ಅವರು ಜೀವನ ಸಾಗಿಸಲು ಸಹಕರಿಸಬೇಕು ಎಂದು ರಾಜ್ಯ ಅಧ್ಯಕ್ಷರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯ ವಕ್ತಾರರಾದ ಸುನಿಲ್ ಕೆ. ಸಿ, ರಾಜ್ಯ ಉಪಾಧ್ಯಕ್ಷರಾದ ಗಂಗಾಧರ್ ಹಾಗೂ ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದಂತಹ ಶ್ರೀ ಡಾ. ಸುಭಾಶ್ಚಂದ್ರ ರಾಠೋಡ ನಿವೃತ್ತ ನ್ಯಾಯಾಧೀಶರು, ವಕೀಲರು, ಮತ್ತು ಈ ಕಾರ್ಯಕ್ರಮ ಅಧ್ಯಕ್ಷತೆಯನ್ನು ವಹಿಸಿದ ಜಿಲ್ಲಾಧ್ಯಕ್ಷರಾದ ಶ್ರೀ ಧರ್ಮು ಚಿನ್ನಿರಾಠೋಡ, ಜಿಲ್ಲಾ ಸಮಿತಿಯ ಪದಾಧಿಕಾರಿಗಳು, ತಾಲೂಕು ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು ಮತ್ತು ನೂರಾರು ಸಂಖ್ಯೆಯ ಹೊರಗುತ್ತಿಗೆ ನೌಕರರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಈ ಕಾರ್ಯಕ್ರಮವನ್ನು ಭಾಗೇಶ ಹೊತಿನಮಡು ನಿರೂಪಿಸಿ, ವಂದಿಸಿದರು.
ವರದಿ: ಚಂದ್ರಶೇಖರ ಪಾಟೀಲ್
