ಶಿವಮೊಗ್ಗ ನಗರದ ಹೃದಯಭಾಗದ ನೆಹರು ರಸ್ತೆಗೆ ಶಾಸಕ ಶ್ರೀ ಎಸ್ ಎನ್ ಚನ್ನಬಸಪ್ಪ ಅವರು ಭೇಟಿ ನೀಡಿ, ಅಲ್ಲಿನ ನೆಹರು ರಸ್ತೆ ವರ್ತಕರ ಸಂಘದ ಸದಸ್ಯರೊಂದಿಗೆ ವಿಶೇಷ ಸಭೆ ನಡೆಸಿದರು.
ಸಭೆಯಲ್ಲಿ ವಿವಿಧ ಪ್ರಮುಖ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು.
ಚರ್ಚಿಸಲಾದ ಪ್ರಮುಖ ವಿಷಯಗಳು:
- ಟ್ರಾಫಿಕ್ ಸಮಸ್ಯೆ: ನೆಹರು ರಸ್ತೆಯಲ್ಲಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಿರುವ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ವ್ಯಾಪಾರಿಗಳ ಸಲಹೆ-ಪರಾಮರ್ಶೆ ಪಡೆದುಕೊಳ್ಳಲಾಯಿತು.
- ಪಾರ್ಕಿಂಗ್ ವ್ಯವಸ್ಥೆ: ನೆಹರು ರಸ್ತೆಗೆ ಬರುವ ವಾಹನಗಳನ್ನು ಕನ್ಸರ್ವೆನ್ಸಿ ರಸ್ತೆಯಲ್ಲಿ ಪಾರ್ಕಿಂಗ್ ವ್ಯವಸ್ಥೆಗೆ ಬೇಕಾಗಿರುವಂತಹ ಅಗತ್ಯ ಕ್ರಮಗಳನ್ನು ತಕ್ಷಣ ಕೈಗೊಳ್ಳಲು ನಿರ್ಧರಿಸಲಾಯಿತು.
- ನೆಹರು ರಸ್ತೆಯಲ್ಲಿ ಯುಜಿಡಿ ಬ್ಲಾಕ್ ಆಗುತ್ತಿರುವ ಸಮಸ್ಯೆಯಿಂದ ಸಾರ್ವಜನಿಕರಿಗೆ ಎದುರಾಗುತ್ತಿರುವ ತೊಂದರೆಗಳನ್ನು ಗಂಭೀರವಾಗಿ ಪರಿಗಣಿಸಿ, ಸಂಬಂಧಿತ ಅಧಿಕಾರಿಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.
- ಅದೇ ರೀತಿ, ನೆಹರು ರಸ್ತೆಯಲ್ಲಿರುವ ಮಹಾನಗರ ಪಾಲಿಕೆಯ ಶೌಚಾಲಯ ಶಿಥಿಲಾವಸ್ಥೆಯಲ್ಲಿದ್ದು, ಸಾರ್ವಜನಿಕರಿಗೆ ಉತ್ತಮ ಸೌಲಭ್ಯಗಳ ಒದಗಿಸುವ ನಿಟ್ಟಿನಲ್ಲಿ ನೂತನ ಶೌಚಾಲಯ ನಿರ್ಮಾಣದ ಕುರಿತು ಚರ್ಚೆ ನಡೆಯಿತು.
ಸಭೆಯಲ್ಲಿ ನೆಹರೂ ರಸ್ತೆಯ ವರ್ತಕರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು, ಸದಸ್ಯರು, ಡಿವೈಎಸ್ಪಿ ಬಾಬು ಅಂಜನಪ್ಪ, ಟ್ರಾಫಿಕ್ ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳು ಭಾಗವಹಿಸಿದ್ದರು.
ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ.
