ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

IPL 2025: ಮುಂಬೈ ಬೌಲರ್​ಗಳ ಮ್ಯಾಜಿಕ್ ; ಹೈದರಾಬಾದ್​ಗೆ 5ನೇ ಸೋಲು

ಮುಂಬೈ ಇಂಡಿಯನ್ಸ್ ತಂಡವು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 4 ವಿಕೆಟ್‌ಗಳ ಗೆಲುವು ಸಾಧಿಸಿ ಐಪಿಎಲ್ 2025ರ ಪ್ಲೇಆಫ್ ಆಸೆಯನ್ನು ಇನ್ನೂ ಜೀವಂತವಾಗಿ ಉಳಿಸಿಕೊಂಡಿದೆ. ಇಡೀ ತಂಡದ ಸಾಂಘಿಕ ಪ್ರದರ್ಶನದಿಂದಾಗಿ ಮುಂಬೈ ಗೆಲುವಿನತ್ತ ಸಾಗಿತು. ಈ ಗೆಲುವಿನೊಂದಿಗೆ ಮುಂಬೈ ತಂಡವು ಈ ಸೀಸನ್‌ನಲ್ಲಿ ಮೂರನೇ ಗೆಲುವು ದಾಖಲಿಸಿದೆ.

ಮುಂಬೈ ಇಂಡಿಯನ್ಸ್ (MI) ತಂಡವು ಸತತ 2 ಪಂದ್ಯಗಳನ್ನು ಗೆಲ್ಲುವ ಮೂಲಕ ಐಪಿಎಲ್ 2025 (IPL 2025) ರಲ್ಲಿ ಮೊದಲ ಬಾರಿಗೆ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದ ತಂಡವು ಸನ್‌ರೈಸರ್ಸ್ ಹೈದರಾಬಾದ್ (SRH) ತಂಡವನ್ನು ಅದರ ತವರು ಮೈದಾನವಾದ ವಾಂಖೆಡೆ ಕ್ರೀಡಾಂಗಣದಲ್ಲಿ 4 ವಿಕೆಟ್‌ಗಳಿಂದ ಸೋಲಿಸಿತು. ಇದರೊಂದಿಗೆ ಮುಂಬೈ ತಂಡವು ಈ ಸೀಸನ್‌ನಲ್ಲಿ ತನ್ನ ಮೂರನೇ ಗೆಲುವು ದಾಖಲಿಸಿತು. ಏತನ್ಮಧ್ಯೆ, ಕಳೆದ ಸೀಸನ್​ನ ಫೈನಲಿಸ್ಟ್ ಸನ್‌ರೈಸರ್ಸ್ ಹೈದರಾಬಾದ್​ಗೆ ಗೆಲುವಿನ ಆವೇಗವನ್ನು ಕಾಯ್ದುಕೊಳ್ಳಲು ಸಾಧ್ಯವಾಗದೆ ಐದನೇ ಸೋಲನ್ನು ಎದುರಿಸಬೇಕಾಯಿತು. ಈ ಸೋಲು ಹೈದರಾಬಾದ್ ತಂಡದ ಪ್ಲೇಆಫ್ ತಲುಪುವ ಆಸೆಗೆ ತೀವ್ರ ಹೊಡೆತ ನೀಡಿದೆ.
ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯ ಹೈಸ್ಕೋರ್ ಪಂದ್ಯವಾಗುವ ನಿರೀಕ್ಷೆಗಳಿದ್ದವು. ಕೆಲವು ದಿನಗಳ ಹಿಂದೆ, ದಕ್ಷಿಣ ಆಫ್ರಿಕಾದ ಮಾಜಿ ವೇಗಿ ಡೇಲ್ ಸ್ಟೇನ್ ಕೂಡಾ ಈ ಪಂದ್ಯದಲ್ಲಿ ಮೊದಲ ಬಾರಿಗೆ 300ರ ಗಡಿ ದಾಟಬಹುದು ಎಂದು ಭವಿಷ್ಯ ನುಡಿದಿದ್ದರು. ಆದರೆ ಪಂದ್ಯ ಆರಂಭವಾದ ತಕ್ಷಣ ಎಲ್ಲರೂ ಆಘಾತಕ್ಕೊಳಗಾದರು. ಈ ಪಂದ್ಯ ನಡೆದ ಪಿಚ್‌ನಲ್ಲಿ ಸನ್‌ರೈಸರ್ಸ್ ತಂಡ ಕಷ್ಟಪಟ್ಟು 150 ರನ್‌ಗಳ ಗಡಿ ದಾಟಲಷ್ಟೇ ಶಕ್ತವಾಯಿತು.

ಮುಂಬೈಗೂ ಪ್ರಯಾಸದ ಜಯ ಇದಕ್ಕೆ ಪ್ರತಿಕ್ರಿಯೆಯಾಗಿ ಮುಂಬೈ ಸ್ಫೋಟಕ ಆರಂಭ ಪಡೆದುಕೊಂಡಿತು. ವಿಶೇಷವಾಗಿ ರೋಹಿತ್ ಶರ್ಮಾ 3 ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ವಾಂಖೆಡೆಯಲ್ಲಿ ಹಾಜರಿದ್ದ ಅಭಿಮಾನಿಗಳನ್ನು ರಂಜಿಸಿದರು. ಆದರೆ ಮತ್ತೊಮ್ಮೆ ರೋಹಿತ್ (26) ತಮ್ಮ ಇನ್ನಿಂಗ್ಸ್ ಅನ್ನು ದೊಡ್ಡ ಸ್ಕೋರ್ ಆಗಿ ಪರಿವರ್ತಿಸುವಲ್ಲಿ ವಿಫಲರಾದರು. ರಯಾನ್ ರಿಕಲ್ಟನ್ (31) ಮತ್ತು ಸೂರ್ಯಕುಮಾರ್ ಯಾದವ್ (26) ಬೌಂಡರಿ ಮತ್ತು ಸಿಕ್ಸರ್‌ಗಳನ್ನು ಸಿಡಿಸುವ ಮೂಲಕ ತಂಡವನ್ನು ಸಂಕಷ್ಟದಿಂದ ಹೊರತಂದರು. ಏತನ್ಮಧ್ಯೆ, ವಿಲ್ ಜ್ಯಾಕ್ಸ್ (36) ಕೂಡ ಉಪಯುಕ್ತ ಕಾಣಿಕೆ ನೀಡಿ ತಂಡವನ್ನು ಗೆಲುವಿನ ಸಮೀಪಕ್ಕೆ ತಂದರು. ಕೊನೆಯಲ್ಲಿ ಪ್ಯಾಟ್ ಕಮ್ಮಿನ್ಸ್ (3/26) ಎರಡೂ ವಿಕೆಟ್‌ಗಳನ್ನು ಪಡೆಯುವ ಮೂಲಕ ಮತ್ತೆ ಆಟವನ್ನು ರೋಚಕಗೊಳಿಸಿದರಾದರೂ ಅದು ತುಂಬಾ ತಡವಾಗಿತ್ತು. ಅಂತಿಮವಾಗಿ ಹಾರ್ದಿಕ್ ಪಾಂಡ್ಯ (21) ಮತ್ತು ತಿಲಕ್ ವರ್ಮಾ (17) ತಂಡವನ್ನು ಗೆಲುವಿನತ್ತ ಕೊಂಡೊಯ್ದರು.

ವರದಿ : ಜಿಲಾನಸಾಬ್ ಬಡಿಗೇರ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ