ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರ್ನಾಟಕದಲ್ಲಿ ಗುಂಡಿ ಮುಕ್ತ ರಸ್ತೆಗಳ ನಿರ್ವಹಣೆ ಗುರಿ – ಎಕೋಫಿಕ್ಸ್ ಎಂಬ ರೆಡಿಮಿಕ್ಸ್ ಪದಾರ್ಥ ಬಳಕೆ

ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಟ್ರೈ ಪಾರ್ಟಿ ಒಡಂಬಡಿಕೆಗೆ ಸಹಿ

ಗುಂಡಿ ಮುಕ್ತ ರಸ್ತೆ ನಿರ್ಮಾಣ

ಬೆಂಗಳೂರು : ಸರ್ಕಾರವು ಕರ್ನಾಟಕ ರಾಜ್ಯವನ್ನು ಗುಂಡಿ ಮುಕ್ತ ರಸ್ತೆಗಳನ್ನಾಗಿಸುವ ಉದ್ದೇಶವನ್ನು ಹೊಂದಿದೆ.

ಹೆಚ್ಚಿನ ಕಾರ್ಮಿಕರ ಅವಶ್ಯಕತೆಯಿಲ್ಲದೆ ಕಡಿಮೆ ಸಮಯದಲ್ಲಿ ಗುಂಡಿ ಮುಚ್ಚಲು ಸಾಧ್ಯವಾಗುವಂತೆ ಎಕೋಫಿಕ್ಸ್ ಎಂಬ ರೆಡಿಮಿಕ್ಸ್ ಪದಾರ್ಥವನ್ನು ಬಳಸಿಕೊಂಡು ರಸ್ತೆಯ ಗುಂಡಿಗಳನ್ನು ಮುಚ್ಚಲು ಸಾಧ್ಯವಾಗುವುದು. ಇದರಿಂದಾಗಿ ಅತಿಯಾಗಿ ಮಳೆಯಾಗುವ ಜಿಲ್ಲೆಗಳಲ್ಲಿ ಆಗಿಂದಾಗ್ಗೆ ಉಂಟಾಗುವ ರಸ್ತೆ ಗುಂಡಿಗಳನ್ನು ತೇವಾಂಶ ಇದ್ದಾಗಲೂ ಕೂಡ ಕಡಿಮೆ ಸಮಯದಲ್ಲಿ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬಹುದಾಗಿರುತ್ತದೆ.

ಕೇಂದ್ರ ರಸ್ತೆ ಸಂಶೋಧನಾ ಸಂಸ್ಥೆಯು, ಕಬ್ಬಿಣದ ಉತ್ಪಾದನೆಯಲ್ಲಿ ಬರುವ Slag ಅನ್ನು ಉಪಯೋಗಿಸಿ, ತೇವಾಂಶವಿರುವ ರಸ್ತೆಗಳಲ್ಲಿಯು ಸಹ, ಹೆಚ್ಚಿನ ಕಾರ್ಮಿಕರ ಅವಶ್ಯಕತೆಯಿಲ್ಲದೆ ಕಡಿಮೆ ಸಮಯದಲ್ಲಿ ಗುಂಡಿ ಮುಚ್ಚಲು ಸಾಧ್ಯವಾಗುವಂತೆ ಎಕೋಫಿಕ್ಸ್ ಎಂಬ ರೆಡಿಮಿಕ್ಸ್ ಪದಾರ್ಥವನ್ನು ತಯಾರಿಸಿದ್ದು, ಕರ್ನಾಟಕ ಸರ್ಕಾರವು ಕೇಂದ್ರ ರಸ್ತೆ ಸಂಶೋಧನಾ ಸಂಸ್ಥೆ ಹಾಗೂ ರಾಮುಕ ಗ್ಲೋಬಲ್ ಸರ್ವಿಸಸ್ ಅವರೊಂದಿಗೆ ಟ್ರೈ ಪಾರ್ಟಿ ಕರಾರು ಒಪ್ಪಂದ ಮಾಡಿಕೊಳ್ಳಲಾಗಿರುತ್ತದೆ.

ಈ ಸಂಬಂಧವಾಗಿ 2025ನೇ ಏಪ್ರಿಲ್ 17 ರಂದು ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಿ. ಕೆ. ಶಿವಕುಮಾರ್ ರವರು ಹಾಗೂ ಮಾನ್ಯ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ರವರ ಉಪಸ್ಥಿಯಲ್ಲಿ ಟ್ರೈ ಪಾರ್ಟಿ -“Ecofix: Ready to Use Pot hole repair mix, for instant repair of distressed roads in state of Karnataka” CSIR – CRRI (Council of Scientific & Industrial Research Central Road Research Institute), ಲೋಕೋಪಯೋಗಿ ಹಾಗೂ ನಗರಾಭಿವೃದ್ಧಿ ಇಲಾಖೆ, ಕರ್ನಾಟಕ ಸರ್ಕಾರ ಮತ್ತು ರಮುಕಾ ಗ್ಲೋಬಲ್ ಸರ್ವೀಸಸ್ ರವರೊಂದಿಗೆ ಮೆಮೊಯಾರ್ಂಡಮ್ ಆಫ್ ಆಂಡರ್ಸ್ಟಾಂಡಿಂಗ್ (Memorandum of understanding –MOU) ಕ್ಕೆ ಸಹಿ ಮಾಡಬೇಕಾಗಿತ್ತು. ಆದರೆ, ತುರ್ತು ಕಾರಣಗಳಿಂದಾಗಿ ಸಚಿವರುಗಳ ಅನುಪಸ್ಥಿತಿಯಲ್ಲಿ ಹಾಗೂ ಅವರ ನಿರ್ದೇಶನದಂತೆ ಡಾ.ಶಾಲಿನಿ ರಜನೀಶ್, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಕರ್ನಾಟಕ ಸರ್ಕಾರ ರವರ ಅಧ್ಯಕ್ಷತೆಯಲ್ಲಿ ಸಹಿ ಮಾಡಲಾಗಿರುತ್ತದೆ.

ಕರ್ನಾಟಕ ಸರ್ಕಾರವು, ಕೇಂದ್ರ ರಸ್ತೆ ಸಂಶೋಧನಾ ಸಂಸ್ಥೆ ಹಾಗೂ ರಾಮುಕ ಗ್ಲೋಬಲ್ ಸರ್ವಿಸಸ್ ರವರ ಸಹಯೋಗದೊಂದಿಗೆ ರಾಜ್ಯ ಹೆದ್ದಾರಿ 265 ರ ರಸ್ತೆಯಲ್ಲಿ ಪ್ರಾಯೋಗಿಕವಾಗಿ 2024ನೇ ಡಿಸೆಂಬರ್ 10 ರಂದು ಗುಂಡಿ ಮುಚ್ಚುವ ಕಾರ್ಯ ಸಹ ಮಾಡಲಾಗಿರುತ್ತದೆ.

ನಗರ ಪ್ರದೇಶಗಳಲ್ಲಿ ಅತಿಯಾಗಿ ಸಂಚಾರ ದಟ್ಟಣೆ ಇರುವುದರಿಂದ ಗುಂಡಿಗಳನ್ನು ಮುಚ್ಚಲು ಸಮಯ ಅವಕಾಶ ಕಡಿಮೆಯಿರುತ್ತದೆ. ಅಂತಹ ಸಮಯದಲ್ಲಿ ಸಂಚಾರ ದಟ್ಟಣೆ ಕಡಿಮೆಯಿದ್ದಾಗ ಅಂದರೆ ರಾತ್ರಿ ಸಮಯ ಕೂಡ ಎಕೋಫಿಕ್ಸ್ ಉಪಯೋಗಿಸಿ ಸಮತಟ್ಟು ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬಹುದಾಗಿರುತ್ತದೆ.

ಎಕೋಫಿಕ್ಸ್ 30 ಕೆ.ಜಿ ಹಾಗೂ 50 ಕೆ.ಜಿ ಚೀಲಗಳಲ್ಲಿ ಲಭ್ಯವಿದ್ದು, ಅದನ್ನು ಕಾಮಗಾರಿ ಸ್ಥಳಕ್ಕೆ ಸರಾಗವಾಗಿ ಸಾಗಿಸಬಹುದಾಗಿರುತ್ತದೆ. ಏಕರೂಪ ದರಪಟ್ಟಿಯಲ್ಲಿ ಕೋಲ್ಡ್ ಮಿಕ್ಸ್ ಪದ್ಧತಿಯಲ್ಲಿ ಗುಂಡಿ ಮುಚ್ಚಲು ತಗಲುವ ಮೊತ್ತ ರೂ. 17/- ಪ್ರತಿ ಕೆ.ಜಿ.ಗೆ ನಿಗದಿಪಡಿಸಲಾಗಿರುತ್ತದೆ. ಎಕೋಫಿಕ್ಸ್ ಪದ್ಧತಿಯಲ್ಲಿ ಸರಬರಾಜು ಮಾಡಿ ಗುಂಡಿ ಮುಚ್ಚಲು ರೂ.15.70/- ಪ್ರತಿ ಕೆ.ಜಿ. ರಂತೆ ಮಾಡಲು ಮೆ:ರಾಮುಕ ಗ್ಲೋಬಲ್ ಸರ್ವಿಸಸ್ ರವರು ಒಪ್ಪಿಕೊಂಡಿರುತ್ತಾರೆ. ಇದರಿಂದಾಗಿ ಗುಂಡಿ ಮುಚ್ಚುವ ವೆಚ್ಚದಲ್ಲಿ ಸುಮಾರು ಶೇ.10 ರಷ್ಟು ಮೊತ್ತ ಸರ್ಕಾರಕ್ಕೆ ಉಳಿತಾಯವಾಗಲಿದೆ.

ಜೆ.ಎಸ್.ಡಬ್ಲ್ಯೂ, ಬಳ್ಳಾರಿ ರವರ ಸಹಯೋಗದೊಂದಿಗೆ ರಾಮುಕ ಗ್ಲೋಬಲ್ ಸರ್ವೀಸಸ್ ರವರು Ecofix Ready to Use Pot hole repair mix ಉತ್ಪಾದನೆ ಮಾಡಿ ಕಡಿಮೆ ದರದಲ್ಲಿ ಕರ್ನಾಟಕ ರಾಜ್ಯ ವ್ಯಾಪ್ತಿಯಲ್ಲಿ ಸರಬರಾಜು ಮಾಡಲು ಒಪ್ಪಿರುತ್ತಾರೆ.

ಲೋಕೋಪಯೋಗಿ ಇಲಾಖೆಯ ಇಲಾಖೆಯ ಎಲ್ಲಾ ಅಭಿಯಂತರರುಗಳಿಗೆ ಹಂತ ಹಂತವಾಗಿ ಎಕೋಫಿಕ್ಸ್ ಉಪಯೋಗಿಸುವುದರ ಬಗ್ಗೆ ತರಬೇತಿ ನೀಡಲಾಗುವುದು. ಇದರಿಂದಾಗಿ ಅತಿ ತುರ್ತಾಗಿ ಗುಂಡಿ ಮುಚ್ಚಿ, ಸಾರ್ವಜನಿಕರಿಗೆ ಹೆಚ್ಚಿನ ಅನೂಕೂಲವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ