ಶಿರಸಿ/ಸೋಂದಾ: ಎಲ್ಲರಿಗೂ ಸಂವಿಧಾನವು ಅವರವರ ಧರ್ಮಾಚರಣೆಗಳಿಗೆ ಸ್ವಾತಂತ್ರ್ಯವನ್ನು ಕೊಟ್ಟಿದೆ. ಪರೀಕ್ಷಾ ನಿಯಮಗಳಿಗೆ ಜನಿವಾರದಿಂದ ಯಾವುದೇ ಉಲ್ಲಂಘನೆಯಾಗುವುದಿಲ್ಲ. ಹಾಗಿರುವಾಗ ಎಲ್ಲರನ್ನೂ ಸರಿಸಮವಾಗಿ ನೋಡಬೇಕಾದ ಅಧಿಕಾರಿಗಳೇ ಜನಿವಾರವನ್ನೇ ಮುಂದಿಟ್ಟುಕೊಂಡು ಪರೀಕ್ಷೆಗೆ ಅಡ್ಡಿ ಪಡಿಸಿದ್ದು ಸರಿಯಲ್ಲ ಎಂದು ಶ್ರೀ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು, ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ
