ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಎಮ್ಮಿಗನೂರು ಗ್ರಾಮದಲ್ಲಿ ಅಬ್ಬರಿಸುತ್ತಿರುವ ಜೆಸಿಬಿಗಳು- ರಾಜ್ಯ ಹೆದ್ದಾರಿ 132ರ ರಸ್ತೆ ವಿಸ್ತರಣೆಗೆ ಚಾಲನೆ

ಬಳ್ಳಾರಿ / ಕಂಪ್ಲಿ : ಕಂಪ್ಲಿ ತಾಲ್ಲೂಕಿನ ಎಮ್ಮಿಗನೂರು ಗ್ರಾಮದಲ್ಲಿ ರಾಜ್ಯ ಹೆದ್ದಾರಿ 132ರಲ್ಲಿ ರಸ್ತೆ ವಿಸ್ತರಣೆಗಾಗಿ ರಸ್ತೆ ಅಕ್ಕಪಕ್ಕದ ಕಟ್ಟಡಗಳನ್ನು ಜೆಸಿಬಿ ಯಂತ್ರಗಳ ಮೂಲಕ ತೆರವುಗೊಳಿಸುವ ಕಾರ್ಯ ಆರಂಭವಾಗಿದ್ದು, ರಸ್ತೆ ಅಕ್ಕಪಕ್ಕದ ದೊಡ್ಡ ದೊಡ್ಡ ಕಟ್ಟಡಗಳು ಧರೆಗುರುಳುತ್ತಿವೆ.
ಅಕ್ರಮ ಕಟ್ಟಡಗಳಿಂದಾಗಿ ಎಮ್ಮಿಗನೂರು ಗ್ರಾಮದಲ್ಲಿ ವಾಹನ ಮತ್ತು ಸಾರ್ವಜನಿಕರ ಸಂಚಾರಕ್ಕೆ ತೀರಾ ಅಡಚಣೆಯಾಗಿರುವ ಹಿನ್ನೆಲೆಯಲ್ಲಿ ರಸ್ತೆ ಅಕ್ಕಪಕ್ಕದ ಅಕ್ರಮ ಕಟ್ಟಡಗಳ ತೆರವಿಗೆ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಕಳೆದ 5-6 ದಿನಗಳಿಂದ ರಸ್ತೆ ಅತೀಕ್ರಮಣ ಕಟ್ಟಡಗಳ ತೆರವು ಕಾರ್ಯಾಚರಣೆ ಭರದಿಂದ ಸಾಗಿದ್ದು, ಸ್ಥಳೀಯರ ವಿರೋಧದ ನಡುವೆಯೇ ಗ್ರಾಮಾಡಳಿತ ಪೊಲೀಸ್ ಸರ್ಪಗಾವಲಿನಲ್ಲಿ ತೆರವು ಕಾರ್ಯವನ್ನು ಕೈಗೆತ್ತಿಕೊಂಡಿದ್ದಾರೆ. ಗ್ರಾಮದ ಕಂಪ್ಲಿ ರಸ್ತೆಯ ಹಳ್ಳದಿಂದ ನಡುವಲ ಮಸೀದಿ, ಜಡೇಸಿದ್ದೇಶ್ವರ ಗದ್ಗಿಯಿಂದ ಕುರುಗೋಡು ರಸ್ತೆಯು ಅತ್ಯಂತ ಕಿರಿದಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿತ್ತಲ್ಲದೆ ಕಿರಿದಾದ ರಸ್ತೆಯಿಂದಾಗಿ ಅನೇಕ ಅಪಘಾತಗಳು ಸಂಭವಿಸಿದ್ದವು. ಜೊತೆಗೆ ವಾಹನ ಸವಾರರು ಆಗಾಗ ಪರಸ್ಪರ ರಸ್ತೆಯ ಸೈಡ್‌ಗಾಗಿ ಜಗಳಗಳನ್ನು ಮಾಡುತ್ತಿದ್ದರು.
ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ ಗ್ರಾಮ ಪಂಚಾಯತಿಯವರು ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಅತೀಕ್ರಮಣ ಕಟ್ಟಡಗಳ ತೆರವುಗೊಳಿಸಲು ತೀರ್ಮಾನಿಸಲಾಗಿತ್ತು. ಅಂತೆಯೇ ಸುಗಮ ಸಂಚಾರಕ್ಕಾಗಿ ರಸ್ತೆ ವಿಸ್ತರಣೆ ಅನಿವಾರ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಕಾನೂನು ಪ್ರಕಾರವೇ ಅಕ್ರಮ ಕಟ್ಟಡಗಳ ತೆರವುಗೊಳಿಸಲಾಗುತ್ತಿದೆ ಎಂದು ಗ್ರಾಮಾಡಳಿತ ಸ್ಪಷ್ಟಪಡಿಸಿದೆ.

ವರದಿ ಜಿಲಾನಸಾಬ್ ಬಡಿಗೇರ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ