ಕ್ಯಾಥೋಲಿಕ್ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ (Pope Francis) ವ್ಯಾಟಿಕನ್ (Vatican) ನಗರದಲ್ಲಿ ನಿಧನರಾದರು. ಫ್ರಾನ್ಸಿಸ್ ಅವರಿಗೆ 88 ವರ್ಷ ವಯಸ್ಸಾಗಿತ್ತು, ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಫ್ರಾನ್ಸಿಸ್ ಅವರನ್ನು ಇತ್ತೀಚೆಗೆ ನ್ಯುಮೋನಿಯಾದಿಂದ (Pneumonia) ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇಂದು ಬೆಳಿಗ್ಗೆ 7:35 ಕ್ಕೆ ಫ್ರಾನ್ಸಿಸ್ ಇಹಲೋಕ ತ್ಯಜಿಸಿದರು ಎಂದು ವ್ಯಾಟಿಕನ್ ಪ್ರಕಟಣೆ ತಿಳಿಸಿದೆ. ಅವರ ನಿಧನದ ಸುದ್ದಿ ತಿಳಿದು ಪ್ರಪಂಚದಾದ್ಯಂತ ಕೋಟ್ಯಂತರ ಕ್ಯಾಥೋಲಿಕರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಪೋಪ್ ಫ್ರಾನ್ಸಿಸ್ ಕಳೆದೊಂದು ವಾರದಿಂದ ಶ್ವಾಸಕೋಶ ಸಂಬಂಧಿತ ಸೋಂಕಿನಿಂದ ಬಳಲುತ್ತಿದ್ದರು. ಫೆಬ್ರವರಿ 14 ರಂದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಅವರು ತೀವ್ರವಾದ ನ್ಯುಮೋನಿಯಾದಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದರು.
ಸೋಮವಾರ ಬೆಳಗ್ಗೆ ನಿಧನರಾದರು. ಅವರಿಗೆ 88 ವರ್ಷ ವಯಸ್ಸಾಗಿತ್ತು. ಭಾನುವಾರದಂದು ತುಸು ಚೇತರಿಸಿಕೊಂಡಿದ್ದ ಅವರು, ಬೆಸಿಲಿಕಾದಲ್ಲಿ ಸೇರಿದ್ದ 35 ಸಾವಿರಕ್ಕೂ ಹೆಚ್ಚು ಭಕ್ತರಿಗೆ ಈಸ್ಟರ್ ಶುಭಾಶಯಗಳನ್ನು ಹೇಳಿದ್ದರು.
ಕಳೆದ ವಾರ ಸೇಂಟ್ ಪೀಟರ್ಸ್ ಚೌಕ್ನಲ್ಲಿ ಕ್ಯಾಥೋಲಿಕ್ ಚರ್ಚ್‌ನ ವರ್ಷಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನಾರೋಗ್ಯದ ಕಾರಣ ಪೋಪ್ ಫ್ರಾನ್ಸಿಸ್ ಅವರಿಗೆ ಸಾಧ್ಯವಾಗಿರಲಿಲ್ಲ. ನಿಗದಿಯಾಗಿದ್ದ ಅನೇಕ ಕಾರ್ಯಕ್ರಮಗಳನ್ನೂ ರದ್ದುಗೊಳಿಸಲಾಗಿತ್ತು. ಪೋಪ್‌ಗೆ ಸಂಪೂರ್ಣ ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದರು. ಅವರ ಸ್ಥಿತಿ ‘ಸ್ಥಿರ’ ಎಂದು ಈ ಹಿಂದೆ ವೈದ್ಯರು ತಿಳಿಸಿದ್ದರು. ಆದರೆ, ಪೋಪ್ ಸ್ಥಿತಿ ಗಂಭೀರವಾಗಿದೆ ಎಂದು ಶನಿವಾರ ಸಂಜೆ ವ್ಯಾಟಿಕನ್ ಪ್ರಕಟಣೆ ತಿಳಿಸಿತ್ತು.
ವರದಿ : ಜಿಲಾನಸಾಬ್ ಬಡಿಗೇರ್.
