
ಬಳ್ಳಾರಿ : ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ನಗರದಲ್ಲಿ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ವತಿಯಿಂದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆ ವೇಳೆ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನಾಕಾರರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯಸಭಾ ಸದಸ್ಯ ಡಾ. ಸೈಯದ್ ನಾಸಿರ್ ಹುಸೇನ್ ಮಾತನಾಡಿ, ‘ವಕ್ಫ್ ತಿದ್ದುಪಡಿ ಮಸೂದೆ ಮೂಲಕ ಕೇಂದ್ರ ಸರ್ಕಾರವು ಅಲ್ಪಸಂಖ್ಯಾತರ ಜಮೀನನ್ನು ದೇಶದ ಉದ್ಯಮಿಗಳಿಗೆ ಕೊಡಲು ಹುನ್ನಾರ ನಡೆಸಿದೆ. ಇದನ್ನು ನಾವು ಸಹಿಸುವುದಿಲ್ಲ. ಇದು ನಮ್ಮ ಹಕ್ಕು. ಕೇಂದ್ರ ಸರ್ಕಾರವು ಕಾನೂನು ಹಿಂಪಡೆಯದಿದ್ದಲ್ಲಿ ತೀವ್ರ ಸ್ವರೂಪದ ಹೋರಾಟ ಮಾಡುತ್ತೇವೆ’ ಎಂದರು.
ದೇಶದ ಯುವಜನರು ಕೇಂದ್ರ ಸರ್ಕಾರಕ್ಕೆ ಪಾಠ ಕಲಿಸುವ ದಿನ ದೂರ ಇಲ್ಲ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು. ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿ
ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟ ಕೇವಲ ಮುಸ್ಲಿಂಮರ ಹೋರಾಟ ಅಲ್ಲ ಇದು ನಮ್ಮೆಲ್ಲರಿಗೆ ಸೇರಿದ ವಿಷಯ ನಾವೆಲ್ಲರೂ ಸೇರಿ ಹೋರಾಟ ಮಾಡುತ್ತಿದ್ದೇವೆ ದೇಶದ ಸ್ವತಂತ್ರ ಹೋರಾಟದಲ್ಲಿ ಮುಸ್ಲಿಮರ ತ್ಯಾಗ ಇದೆ ಇಂದು ನಾವು ಹಿಂದೂ, ಕ್ರೈಸ್ತ , ದಲಿತ, ಲಿಂಗಾಯಿತ ಎಂಬ ಧರ್ಮಧಾರಿತ ಸಮಾಜದಲ್ಲಿ ಬದುಕುತ್ತಿದ್ದೇವೆ. ಮುಸ್ಲಿಮರು ಮಾತ್ರವಲ್ಲದೆ ಎಲ್ಲಾ ಜನರ ಹಕ್ಕುಗಳ ರಕ್ಷಣೆ ಮಾಡಲು ಎಲ್ಲಾ ಧರ್ಮಗಳ ಜನರು ಒಗ್ಗಟ್ಟಾಗಬೇಕೆಂದರು.
ಕೇಂದ್ರ ಸರ್ಕಾರ ಮುಸ್ಲಿಮರ ಹಕ್ಕು ಕಿತ್ತುಕೊಂಡರೆ ನಮ್ಮ ಹಕ್ಕು ಕಿತ್ತುಕೊಂಡಂತೆ ಎಂಬದನ್ನ ಮರೆಯಬಾರದು ಎಂದು ಅವರು ಮಹಾತ್ಮಗಾಂಧಿ, ಜವಾಹರಲಾಲ್ ನೆಹರು, ಹಾಗೂ ಡಾಕ್ಟರ್ ಬಿ. ಆರ್. ಅಂಬೇಡ್ಕರ್ ಅವರು ನೀಡಿದ ಶಕ್ತಿಯ ನಮ್ಮ ಹಿಂದಿನ ಹೋರಾಟಕ್ಕೆ ಪ್ರೇರಣೆಯಾಗಬೇಕು ಅಗತ್ಯ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗದಂತಹ ಅನೇಕ ಸಮಸ್ಯೆಗಳು ದೇಶವನ್ನು ಕಾಡುತ್ತಿವೆ. ಜನರನ್ನು ಮೂರ್ಖರಾಗಿಸಲು ಕೇಂದ್ರ ಸರ್ಕಾರ ಯತ್ನ ನಡೆಸಿದೆ ಆದರೆ ಜನರು ಮೂರ್ಖರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಚಿವ ಹಾಗೂ ಶಾಸಕ ಬಿ. ನಾಗೇಂದ್ರ ವಕ್ಫ್ ಕಾಯ್ದೆ ವಿರುದ್ಧದ ಹೋರಾಟದಲ್ಲಿ ಮುಸ್ಲಿಮರು ಅಷ್ಟೇ ಅಲ್ಲ ಹಿಂದೂಗಳು ಬಂದಿದ್ದಾರೆ. ಇಷ್ಟೊಂದು ಬಿಸಿಲಿನಲ್ಲಿ ಇಷ್ಟೊಂದು ಸಾವಿರಾರು ಜನರು ಸಮುದ್ರದಂತೆ ಸೇರಿದ್ದಾರೆ, ಅಂದರೆ ವಕ್ಫ್ ತಿದ್ದುಪಡಿ ಕಾನೂನು ಎಷ್ಟು ಕರಾಳವಾಗಿದೆ ಎಂದು ಅರ್ಥ ಮಾಡಿಕೊಳ್ಳಬೇಕು. ಕಾಂಗ್ರೆಸ್ ನ ಎಲ್ಲಾ ನಾಯಕರು ನಿಮ್ಮ ಜೊತೆ ಇದ್ದೇವೆ ನಿಮಗೆ ಶಕ್ತಿ ನೀಡಲು ನಾವು ಬಂದಿದ್ದೇವೆ. ಕಾಯ್ದೆ ಪ್ರತಿ ಹರಿದು ಹಾಕೋಣ ಇದನ್ನು ನಾವು ಒಪ್ಪುವುದಿಲ್ಲ ಇದು ಧರ್ಮದ ವಿರುದ್ಧದ ಹೋರಾಟವಲ್ಲ ಕಾಯ್ದೆ ವಿರುದ್ಧದ ಹೋರಾಟ ಬಳ್ಳಾರಿಯಲ್ಲೇ ಹಿಂದೂ ಮುಸ್ಲಿಂರು ಅಣ್ಣ – ತಮ್ಮಂದಿರಂತೆ ಇದ್ದೇವೆ. ಕಾಯ್ದೆಯನ್ನು ಅನುಷ್ಠಾನ ಮಾಡಲು ಬಿಡಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಗರದ ಕೌಲ್ ಬಜಾರ್ ನಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಮೋತಿ ಸರ್ಕಲ್ ನಲ್ಲಿ ಸಂಪನ್ನಗೊಂಡಿತು.
ವಿವಾದಿತ ವಕ್ಫ ತಿದ್ದುಪಡಿ ಮಸೂದೆ ವಿರೋಧಿಸಿ ಬಳ್ಳಾರಿ ನಗರದಲ್ಲಿ ಬೃಹತ್ ಪ್ರತಿಭಟನಾ ಜಾಥದ ನಂತರ ಜಿಲ್ಲಾಧಿಕಾರಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಹಾಗೂ ಎಸ್ಪಿ ಶೋಭಾ ರಾಣಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಬಳ್ಳಾರಿ ಸಂಸದ ಇ. ತುಕಾರಾಮ್, ಲಿಡ್ಕರ್ ಅಧ್ಯಕ್ಷ ಮುಂಡರಿಗಿ ನಾಗರಾಜ್, ವಕ್ಫ್ ಮಂಡಳಿ ಜಿಲ್ಲಾಧ್ಯಕ್ಷ ಹುಮಾಯೂನ್ ಖಾನ್ , ಬಳ್ಳಾರಿಯ ಮೇಯರ್ ಮೂಲಂಗಿ ನಂದೀಶ್, ಎ ಮಾನಯ್ಯ, ಖಾಜಿ ಗುಲಾಂ ಸಿದ್ದಿಕ್ಕಿ,
ಡಿಸಿಸಿ ಅಧ್ಯಕ್ಷ ಅಲ್ಲಮ ಪ್ರಶಾಂತ್, ಹುಸೇನ್ ಪೀರ, ದಾದಾ ಸಾಬ್, ಕಣೆಕಲ್ ಮಾಬುಸಾಬ್, ಅಲ್ಲಾಭಕ್ಷ, ಕಾಂಗ್ರೆಸ್ ವಕ್ತಾರಾ ವೆಂಕಟೇಶ್ ಹೆಗಡೆ, ಮಹಾನಗರ ಪಾಲಿಕೆ ಸದಸ್ಯರಾದ ಜಬ್ಬಾರ್, ನೂರ್ ಮೊಹಮ್ಮದ್, ಆಸಿಫ್, ಟಿ. ನಾಜ್, ಮೊಹಮ್ಮದ್, ಮಿಂಚು ಶ್ರೀನಿವಾಸ್, ಕುಬೇರಾ, ಪೇರಂ ವಿವೇಕ್, ಗಾದೆಪ್ಪ, ರಾಜೇಶ್ವರಿ, ಅಸ್ಲಾಂ, ಕಾಂಗ್ರೆಸ್ ಮುಖಂಡರಾದ ಅಯಾಜ್ ಅಹ್ಮದ್, ಮೈನುದ್ದೀನ್, ಶಿವರಾಜ್, ಶ್ರೀನಿವಾಸ್, ಗೋವಿಂದ, ಮುಸ್ಲಿಂ ಮುಖಂಡರು ಹಾಗೂ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಜಿಲ್ಲಾ ಸಮಿತಿಯ ಎಲ್ಲಾ ಪದಾಧಿಕಾರಿಗಳು, ಎಲ್ಲಾ ಮಸೀದಿಗಳ ಮುಖ್ಯಸ್ಥರು ಸೇರಿದಂತೆ ಮುಸ್ಲಿಂ ಬಾಂಧವರು ಸೇರಿದರು.
ವರದಿ : ಜಿಲಾನಸಾಬ್ ಬಡಿಗೇರ್.
