ಜಮ್ಮು-ಕಾಶ್ಮೀರದ ಪಹಲ್ಗಾಮ್ದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ನಡೆದ ಉಗ್ರರ ಗುಂಡಿನ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮೃತಪಟ್ಟಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿ, ಮಂಜುನಾಥ್ ಮೃತ ದುರ್ದೈವಿ. ಉದ್ಯಮಿ ಮಂಜುನಾಥ ಅವರ ಪತ್ನಿ ಪಲ್ಲವಿ ಮತ್ತು ಪುತ್ರ ಸುರಕ್ಷಿತವಾಗಿದ್ದಾರೆ.
ಮೃತ ಮಂಜುನಾಥ್ ಪತ್ನಿ ಪಲ್ಲವಿ, ಏಪ್ರಿಲ್ 19ರಂದು ಪ್ರವಾಸಕ್ಕೆ ಹೋಗಿದ್ದರು. ಅವರ ಕಣ್ಣೆದುರಿಗೆ ಅವರ ಪತಿ ಮೃತಪಟ್ಟಿದ್ದಾರೆ. ನನ್ನ ಗಂಡನನ್ನು ಸಾಯಿಸಿ ನನ್ನ ಮಗನಿಗೆ ಬೈದು ಹಲ್ಲೆ ಮಾಡಿದ್ದಾರೆ. ನನ್ನ ಮಗನನ್ನೂ ಕೊಂದು ಬಿಡಿ ಎಂದು ಹೇಳಿದ್ವಿ. ನಿನ್ನ ಕೊಲ್ಲಲ್ಲ ಹೋಗಿ ಎಂದು ಹೇಳಿದರು. ನನ್ನ ಪತಿಯನ್ನು ಕೊಂದು ಉಗ್ರರು ಅಲ್ಲೇ ಓಡಾಡುತ್ತಿದ್ದರು ಎಂದು ಹೇಳಿದರು.
ಮಂಜುನಾಥ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ, ಶಿವಮೊಗ್ಗದ ನಿವಾಸದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು, ಮಂಜುನಾಥ್ ಪತ್ನಿ ಪಲ್ಲವಿಯವರು ಮಲ್ನಾಡ್ ಅಡಕೆ ಮಾರ್ಕೆಟಿಂಗ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ನ ಬೀರೂರು ಬ್ರ್ಯಾಂಚ್ನಲ್ಲಿ ಮ್ಯಾನೇಜರ್ ಆಗಿದ್ದಾರೆ.
ವರದಿ : ಜಿಲಾನಸಾಬ್ ಬಡಿಗೇರ್.
