ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜಿಲ್ಲಾ ಆಸ್ಪತ್ರೆಯಲ್ಲಿ ಆದಷ್ಟು ಬೇಗ ಎಂ. ಆರ್. ಐ ಸ್ಕ್ಯಾನ್ ಸೆಂಟರ್ ಪ್ರಾರಂಭಿಸಲು ಮನವಿ

ಬಾಗಲಕೋಟೆ: ಡಾ|| ಬಾಬಾಸಾಹೇಬ ಅಂಬೇಡ್ಕರ ಕ್ರೀಡಾ, ಸಾಂಸ್ಕೃತಿಕ, ನಗರ & ಗ್ರಾಮೀಣಾಭಿವೃದ್ಧಿ ಸಂಸ್ಥೆ(ರಿ.), ನವನಗರ – ಬಾಗಲಕೋಟೆ ವತಿಯಿಂದ ಬಾಗಲಕೋಟೆ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಶೀಘ್ರವಾಗಿ ಎಮ್. ಆರ್. ಐ ಸ್ಕ್ಯಾನಿಂಗ್ ಮಷೀನ್ ಅಳವಡಿಸಿ ಆದಷ್ಟು ಬೇಗ ಎಂ. ಆರ್. ಐ ಸ್ಕ್ಯಾನ್ ಸೆಂಟರ್ ಪ್ರಾರಂಭಿಸುವಂತೆ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕರಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲಾಸ್ಪತ್ರೆಯಲ್ಲಿ ಎಂ. ಆರ್. ಐ ಸ್ಕ್ಯಾನ್ ಲಭ್ಯವಿಲ್ಲದ ಕಾರಣ ಜಿಲ್ಲೆಯ ಬಡ ರೋಗಿಗಳು ಹಲವು ವರ್ಷಗಳಿಂದ ಬೇರೆ ಬೇರೆ ಜಿಲ್ಲೆಗಳಿಗೆ ಹೋಗಿ ಎಮ್.ಆರ್.ಐ ಸ್ಕ್ಯಾನ್ ಮಾಡಿಸಿಕೊಂಡು ಬರುತ್ತಿದ್ದಾರೆ. ಇದರಿಂದ ಬಡ ರೋಗಿಗಳು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ.

ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ಎಮ್.ಆರ್.ಐ ಸ್ಕ್ಯಾನ್ ಸೆಂಟರ್ ನ ಕಾಮಗಾರಿ ಚಾಲ್ತಿ ಹಂತದಲ್ಲಿದ್ದು ಆದಷ್ಟು ಬೇಗ ಕಾಮಗಾರಿಯನ್ನು ಪೂರ್ಣಗೊಳಿಸಿ ಸ್ಕ್ಯಾನ್ ಸೆಂಟರ್ ಅನ್ನು ಪ್ರಾರಂಭಿಸಲು ನಮ್ಮ ಸಂಸ್ಥೆಯಿಂದ ಈ ಹಿಂದೆ ಅನೇಕ ಬಾರಿ ಮನವಿ ಮಾಡಲಾಗಿದೆ. ಸದರಿ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ ಬಡ ಜನರಿಗೆ ಅನೂಕೂಲ ಮಾಡಿಕೊಡಬೇಕೆಂದು ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಡಾ|| ಬಾಬಾಸಾಹೇಬ ಅಂಬೇಡ್ಕರ ಕ್ರೀಡಾ, ಸಾಂಸ್ಕೃತಿಕ, ನಗರ & ಗ್ರಾಮೀಣಾಭಿವೃದ್ಧಿ ಸಂಸ್ಥೆ(ರಿ.), ನವನಗರ-ಬಾಗಲಕೋಟೆಯ ಅಧ್ಯಕ್ಷರಾದ ಶ್ರೀಧರ ನೀಲನಾಯಕ, ಕಾರ್ಯದರ್ಶಿಗಳಾದ ಶ್ರೀಕಾಂತ ನೀಲನಾಯಕ, ಇಲಿಯಾಸ್ ಮಧರಖಂಡಿ, ಸಿದ್ದು ಪೂಜಾರಿ, ರವೀಂದ್ರ ಆಲೂರ, ಮಹಿಬೂಬ ಬೆಣ್ಣೂರ, ಲಖನ ರೋಖಡೆ, ಬಂದೇನವಾಜ ಬದಾಮಿ, ತೌಸಿಫ ಕೆರೂರ ಮತ್ತಿತರರು ಉಪಸ್ಥಿತರಿದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ